ಬೆಳಗಾವಿ: ಜಿಲ್ಲೆಯಾದ್ಯಂತ 1ರಿಂದ 9ನೇ ತರಗತಿಯವರೆಗಿನ ಶಾಲೆಗಳನ್ನು ಜ.17ರಿಂದ ಪುನರಾರಂಭಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಬುಧವಾರ ಆದೇಶ ಹೊರಡಿಸಿದ್ದಾರೆ.
‘ಜಿಲ್ಲೆಯಲ್ಲಿ ಕೊರೊನಾ ವೈರಾಣು ಹರಡುವಿಕೆ ತಡೆಯುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲ ಮಾಧ್ಯಮದ ಶಾಲೆಗಳನ್ನು ಜ.19ವರೆಗೆ ತೆರೆಯದಂತೆ ಆದೇಶಿಸಲಾಗಿತ್ತು.
ಬುಧವಾರ ನಡೆದ ವಿಡಿಯೊ ಸಂವಾದದಲ್ಲಿ ಶಿಕ್ಷಣ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿ ನೀಡಿದ ನಿರ್ದೇಶನದ ಅನ್ವಯ ಆದೇಶವನ್ನು ಪರಿಷ್ಕರಿಸಲಾಗಿದೆ’ ಎಂದು ತಿಳಿಸಿದ್ದಾರೆ.
Laxmi News 24×7