Breaking News

355 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 42,000 ಸಂಬಳ

Spread the love

karnataka Village Accountant Recruitment 2022: ಕರ್ನಾಟಕ ಕಂದಾಯ ಇಲಾಖೆಯು(Karnataka Revenue Department) 355 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸರ್ಕಾರಿ ಉದ್ಯೋಗ(Government Job) ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಅಕ್ಟೋಬರ್ 25ರಂದು ಕರ್ನಾಟಕ ಗ್ರಾಮ ಲೆಕ್ಕಿಗ(Village Accountant) ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ revenue.kar.nic.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ ಕರ್ನಾಟಕ ಕಂದಾಯ ಇಲಾಖೆ
ಹುದ್ದೆಯ ಹೆಸರು ಗ್ರಾಮ ಲೆಕ್ಕಾಧಿಕಾರಿ
ಒಟ್ಟು ಹುದ್ದೆಗಳು 355
ವಿದ್ಯಾರ್ಹತೆ ದ್ವಿತೀಯ ಪಿಯುಸಿ, ಪದವಿ
ಉದ್ಯೋಗದ ಸ್ಥಳ ಕರ್ನಾಟಕ
ವೇತನ ಮಾಸಿಕ 21,400-42,000
ನೋಟಿಫಿಕೇಶನ್ ಬಿಡುಗಡೆ ದಿನಾಂಕ 25/10/2021

: SSLR Recruitment: 3,000 ಲೈಸೆನ್ಸ್​ಡ್​​ ಲ್ಯಾಂಡ್​ಲಾರ್ಡ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಸರ್ಕಾರ

ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ VA ನೇರ ನೇಮಕಾತಿಗೆ ಆದೇಶ ಹೊರಡಿಸಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ” ಆಯಾ ಜಿಲ್ಲೆಗಳಲ್ಲಿ ಮಂಜೂರಾದ ಗ್ರಾಮಲೆಕ್ಕಿಗರ ಹುದ್ದೆಯಲ್ಲಿ ಶೇಕಡ 30ಕ್ಕಿಂತ ಹೆಚ್ಚಿನ ಹುದ್ದೆಗಳು ಖಾಲಿ ಇದ್ದಲ್ಲಿ, ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿ. ಅಂತಿಮ ನೇಮಕಾತಿ ಆದೇಶವನ್ನು ಹೊರಡಿಸುವ ಮುನ್ನ ಆಯವ್ಯಯದಲ್ಲಿ ಅನುದಾನದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕಡ್ಡಾಯವಾಗಿ ಸರ್ಕಾರದ ಅನುಮತಿಯನ್ನು ಪಡೆಯಲು ಅಗತ್ಯ ಕ್ರಮ ವಹಿಸಿ,” ಎಂದು ಹೇಳಿದ್ದಾರೆ.

ಹುದ್ದೆಯ ಮಾಹಿತಿ:
ಚಾಮರಾಜನಗರ- 40
ಬೆಂಗಳೂರು-11
ಉಡುಪಿ-18
ರಾಮನಗರ-1
ಚಿತ್ರದುರ್ಗ-59
ಶಿವಮೊಗ್ಗ-69
ಹಾಸನ- 34
ಮಂಡ್ಯ-54
ರಾಯಚೂರು-51
ದಾವಣಗೆರೆ-18

ವಿದ್ಯಾರ್ಹತೆ:
ಕರ್ನಾಟಕ ಕಂದಾಯ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಮ ಲೆಕ್ಕಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ದ್ವಿತೀಯ ಪಿಯುಸಿ/ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಕಂದಾಯ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಮ ಲೆಕ್ಕಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-35 ವರ್ಷದೊಳಗಿರಬೇಕು.

: EMPRI Recruitment 2022: ತಿಂಗಳಿಗೆ 1.20 ಲಕ್ಷ ಸಂಬಳ, M. Sc ಆದವರಿಗೆ ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ

ವಯೋಮಿತಿ ಸಡಿಲಿಕೆ:

2A, 2B, 3A, 3B ಅಭ್ಯರ್ಥಿಗಳು: 3 ವರ್ಷಗಳು

SC, ST (P) ಮತ್ತು ST (H) ಅಭ್ಯರ್ಥಿಗಳು: 5 ವರ್ಷಗಳು

PwD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
2A, 2B, 3A, 3B ಅಭ್ಯರ್ಥಿಗಳು: 200 ರೂ.
SC, ST ಅಭ್ಯರ್ಥಿಗಳು: 100 ರೂ.

ಆಯ್ಕೆ ಪ್ರಕ್ರಿಯೆ:
ಸಂದರ್ಶನ


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ