Breaking News

ರಾಜ್ಯದಲ್ಲಿ ಮತ್ತೆ ಮಹಾಮಾರಿ ಕೊರೊನಾ ರಣಕೇಕೆ , ಹೊಸದಾಗಿ 25005 ಪಾಸಿಟಿವ್ ಕೇಸ್‍,ಬೆಳಗಾವಿ ಜಿಲ್ಲೆಯಲ್ಲಿ 276 ಕೇಸ್‍ಗಳು ಪತ್ತೆ

Spread the love

ರಾಜ್ಯದಲ್ಲಿ ಇಂದು ಮತ್ತೆ ಮಹಾಮಾರಿ ಕೊರೊನಾ ರಣಕೇಕೆ ಹಾಕಿದೆ. ಇಂದು ಹೊಸದಾಗಿ 25005 ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ 276 ಕೇಸ್‍ಗಳು ಪತ್ತೆಯಾಗಿವೆ.

ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ರಾಜ್ಯದಲ್ಲಿ 25005 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅದೇ ರೀತಿ 8 ಜನರು ಇಂದು ಸಾವನ್ನಪ್ಪಿದ್ದಾರೆ. ಇಂದು ಶೇ.12.39ರಷ್ಟು ಪಾಸಿಟಿವಿಟಿ ರೇಟ್ ದಾಖಲಾಗಿದೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ 276 ಪಾಸಿಟಿವ್ ಕೇಸ್‍ಗಳು ದೃಢಪಟ್ಟಿದ್ದು. ಒಟ್ಟು ಸೋಂಕಿತರ ಸಂಖ್ಯೆ 81362ಕ್ಕೆ ಏರಿಕೆಯಾಗಿದೆ. ಇಂದು 19 ಜನರು ಗುಣಮುಖರಾಗಿದ್ದು, ಈವರೆಗೆ 79200 ಜನರು ಗುಣಮುಖರಾಗಿದ್ದಾರೆ. ಓರ್ವ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದ್ದು.

ಈ ಮೂಲಕ ಒಟ್ಟು ಸಾವಿನ ಸಂಖ್ಯೆ 949ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ 1213 ಆಕ್ಟಿವ್ ಕೇಸ್‍ಗಳು ಬಾಕಿಯಿವೆ. ಇನ್ನು ಬೆಳಗಾವಿ ನಗರ ತಾಲೂಕಿನಲ್ಲಿಯೇ 213 ಕೇಸ್‍ಗಳು ದಾಖಲಾಗಿದ್ದರೆ, ಅಥಣಿ-04, ಬೈಲಹೊಂಗಲ-10, ಚಿಕ್ಕೋಡಿ-23, ಗೋಕಾಖ್-11, ಹುಕ್ಕೇರಿ-03, ಖಾನಾಪುರ-01, ರಾಮದುಗ-03, ರಾಯಬಾಗ್-03, ಇತರೆ-05 ಕೊರೊನಾ ಕೇಸ್‍ಗಳು ದೃಢಪಟ್ಟಿವೆ. ಒಟ್ಟಿನಲ್ಲಿ ಒಂದು ಕಡೆ ವಿಪರೀತ ತಂಡಿಯಿಂದ ಬೆಚ್ಚಿ ಬಿದ್ದಿರುವ ಜಿಲ್ಲೆಯ ಜನತೆಗೆ ಮತ್ತೊಂದು ಕಡೆ ಕೊರೊನಾ ತನ್ನ ಆರ್ಭಟ ಮುಂದುವರಿಸಿದ್ದು, ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ