Breaking News

ಚೇಂಬರ್-ಚೇರು ಬಿಟ್ಟರೆ ಈ ಹುದ್ದೆಯಲ್ಲಿ ಮತ್ತೇನೂ ಇಲ್ಲ : ರೇಣುಕಾಚಾರ್ಯ

Spread the love

ಬೆಂಗಳೂರು, ಜ.14-ರಾಜಕೀಯ ಕಾರ್ಯದರ್ಶಿ ಹುದ್ದೆ ಕೇವಲ ಹೋದ್ಯ ಪುಟ್ಟ, ಬಂದ್ಯಾ ಪುಟ್ಟ ಎಂಬಂತಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೇಂಬರ್ ಮತ್ತು ಚೇರು ಬಿಟ್ಟರೆ ಈ ಹುದ್ದೆಯಲ್ಲಿ ಮತ್ತೇನೂ ಇಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಕಿಡಿ: ಸರ್ಕಾರವನ್ನು ಅಸ್ತಿರ ಗೊಳಿಸಲು , ಬಿಜೆಪಿಗೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ನಾಟಕೀಯವಾಗಿ ಪಾದಯಾತ್ರೆ ಮಾಡಿದ್ದರು ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರಿಗೆ ಪಾದಯಾತ್ರೆ ಇಷ್ಟ ವಿರಲಿಲ್ಲ. ಡಿಕೆಶಿ ನಾಯಕರಾಗಿ ಎಲ್ಲಿ ಹೊರ ಹೊಮ್ಮುತ್ತಾರೋ , ಡಿಕೆಶಿಯನ್ನ ಸಿಎಂ ಅಭ್ಯರ್ಥಿ ಅಂತ ಘೋಷಣೆ ಮಾಡ್ತಾರೆನೋ ಅನ್ನೋ ಆತಂಕವೂ ಇತ್ತು ಎಂದು ವಾಗ್ದಾಳಿ ನಡೆಸಿದರು.ಸಿದ್ದರಾಮಯ್ಯ ಅವರ ಪಟಾಲಂ, ಸಿದ್ದರಾಮಯ್ಯ ಮುಂದಿನ ಸಿಎಂ ಅಂತ ಒಂದು ಕಡೆ ಘೋಷಣೆ ಕೂಗ್ತಿದ್ರು. ಕಾಂಗ್ರೆಸ್ ನವರಿಗೆ ಪಾದಯಾತ್ರೆ ಅಭ್ಯಾಸ ಇರಲಿಲ್ಲ. ಹೇಗಿದ್ದರೂ, ಬಂಧಿಸ್ತಾರೆ ಅನ್ನೋ ನಂಬಿಕೆಯಿಂದ ಪಾದಯಾತ್ರೆ ಮಾಡುತ್ತಿದ್ದರು ಎಂದ ಅವರು, ಹಿಂದೆ ನಮ್ಮ ನಾಯಕ ಯಡಿಯೂರಪ್ಪ ಹೋರಾಟ ಮಾಡಿ, ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದರು. ಡಿ.ಕೆ. ಶಿವಕುಮಾರ್ ಹೊಸ ಟ್ರಾಕ್ ಪ್ಯಾಂಟï, ಶೂ ಎಲ್ಲಾ ಖರೀದಿಸಿದ್ದರು. ರ್ಯಾಂಪ್ ವಾಕ್ ಮಾಡಿ ರಿಹರ್ಸಲ್ ಮಾಡುತ್ತಿದ್ದರು ಎಂದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ