Breaking News

ಒಂದಲ್ಲ..ಎರಡಲ್ಲ..11 ಬಾರಿ ಕೋವಿಡ್ ಲಸಿಕೆ ಪಡೆದ ಭೂಪ..!

Spread the love

ಒಂದು ವರ್ಷದ ಅವಧಿಯಲ್ಲಿ 11 ಬಾರಿ ಕೋವಿಡ್ ಲಸಿಕೆಯನ್ನು 84 ವರ್ಷದ ವೃದ್ಧ ವ್ಯಕ್ತಿಯೊರ್ವ ಪಡೆದಿರುವ ಘಟನೆ ಬಿಹಾರದಲ್ಲಿ ಕಂಡು ಬಂದಿದೆ.

ಬಿಹಾರದ ಮಾಧೇಪುರ ಜಿಲ್ಲೆಯ ನಿವಾಸಿ ಬ್ರಹ್ಮದೇವ್ ಮಂಡಲ್ ಎಂಬ ವೃದ್ಧ ವ್ಯಕ್ತಿಯೇ 11 ಬಾರಿ ಲಸಿಕೆ ಪಡೆದ ಪುಣ್ಯಾತ್ಮ. ಬ್ರಹ್ಮದೇವ್ ಮಂಡಲ್ ಅಂಚೆ ಇಲಾಖೆಯ ನಿವೃತ್ತ ಸರ್ಕಾರಿ ನೌಕರ. ಈ ವಾರದ ಆರಂಭದಲ್ಲಿ 12ನೇ ಬಾರಿಗೆ ಕೋವಿಡ್ ಲಸಿಕೆ ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಬ್ರಹ್ಮದೇವ್ ಮಂಡಲ್ ಅವರು ಆರೋಗ್ಯ ಕಾರ್ಯಕರ್ತರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ನಂತರ ತನಿಖೆ ವೇಳೆ ತಮ್ಮ ತಪ್ಪನ್ನು ಒಪ್ಪಿಕೊಂಡ ಬ್ರಹ್ಮದೇವ್ ಮಂಡಲ್ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ ಬಳಸಿ 11 ಬಾರಿ ಲಸಿಕೆ ಪಡೆದುಕೊಂಡಿರುವ ವಿಚಾರ ಬಹಿರಂಗಪಡಿಸಿದ್ದಾರೆ. ಅಲ್ಲದೇ 11 ಬಾರಿ ಲಸಿಕೆ ಸ್ವೀಕರಿಸಿದ್ದರಿಂದ ತಾನು ಹೊಂದಿದ್ದ ಕಾಯಿಲೆಗಳಿಂದ ಗುಣಮುಖ ಆಗಿದ್ದೇನೆ ಎಂದೂ ಹೇಳಿದ್ದಾರೆ.

ಬ್ರಹ್ಮದೇವ್ ಮಂಡಲ್ ವಿರುದ್ಧ ಪುರೈನಿ ಪೆÇಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 188(ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅಸಹಕಾರ), 419(ವ್ಯಕ್ತಿತ್ವದಿಂದ ವಂಚನೆ), ಮತ್ತು 420(ವಂಚನೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ