Breaking News

ರಾಯಬಾಗ ತಾಲೂಕಿನ ಮುಳಗಳಖೋಡ ಶ್ರೀ ಯಲ್ಲಮ್ಮ ದೇವಿ ಜಾತ್ರೆಯಲ್ಲಿ ಕೋವಿಡ್ ರೂಲ್ಸ್ ಬ್ರೇಕ್

Spread the love

ಚಿಕ್ಕೋಡಿ : ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಶ್ರೀ ಯಲ್ಲಮ್ಮ ದೇವಿ ಜಾತ್ರೆಯಲ್ಲಿ ನೂರಾರು ಜನರು ಸೇರಿ ಜಾತ್ರೆ ಮಾಡುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಆದರೆ, ಸಂಬಂಧಿಸಿದ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪಕ್ಕದ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಹಾಗೂ ಕೊರೊನಾ ಸೋಂಕಿತ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆದ್ರೆ, ಮಹಾರಾಷ್ಟ್ರದ ಗಡಿಗೆ ಹೊಂದಿರುವ ಚಿಕ್ಕೋಡಿಯಲ್ಲಿ ಮಾತ್ರ ಅಧಿಕಾರಿಗಳು ನಿರ್ಲಕ್ಷ್ಯತೆ ತೋರಿಸುತ್ತಿದ್ದಾರೆ. ಜನರಿಗೆ ಕೊರೊನಾ, ಒಮಿಕ್ರಾನ್ ಬಗ್ಗೆ ಜಾಗೃತಿ ಮೂಡಿಸಬೇಕಿದ್ದ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.

ಮುಗಳಖೋಡ ಜಾತ್ರೆಯಲ್ಲಿ ಭಾಗಿಯಾದ ಜನರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ನಿರ್ಲಕ್ಷ್ಯತೆ ತೋರಿದ್ದಾರೆ. ಜನರಿಗೆ ತಿಳುವಳಿಕೆ ಹೇಳಬೇಕಿದ್ದ ಪೊಲೀಸರು, ತಾಲೂಕಾಡಳಿತದ ಸಿಬ್ಬಂದಿಯೂ ಕಾಣಿಸುತ್ತಿಲ್ಲ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ