ಇದೀಗ ಸಿಂದಗಿ ಪೊಲೀಸರು ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ ನೂರ್‌ಅಹ್ಮದ್ ಬುಡ್ಡೆಸಾಬ್ ನಾಯಿಕ್, ಸಮೀರ ರಫೀಕ್ ನಾಯಿಕ್ ಬಂಧಿತ ಆರೋಪಿಗಳು.
ಈ ಇಬ್ಬರು ಆರೋಪಿಗಳು ಗುರುವಾರ ತಡರಾತ್ರಿ ಆಟೋ ಚಾಲಕನಾಗಿದ್ದ ಆಸೀಫ್ ಮೆಹಬೂಬ್ ಜಿನಾವರ್ ಎಂಬಾತನನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದರು.
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳು ಕೊಲೆ ನಡೆಸಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸಿಂದಗಿ ಪಿಎಸ್‌ಐ ನಿಂಗಪ್ಪ ಪೂಜಾರಿ ಹಾಗೂ ತಂಡ 24 ಘಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸಿದೆ.
ಮೃತ ಆಸೀಫ್ ಮೆಹಬೂಬ್ ಜಿನಾವರ್ ಸಿಂದಗಿ ಪಟ್ಟಣದ ಶಿವಶಂಕರ ಬಡಾವಣೆಯ ನಿವಾಸಿಯಾಗಿದ್ದು, ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದನು.
ತಡರಾತ್ರಿ ಕೆಲಸ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಆಸೀಫ್ ಕೊಲೆ ಮಾಡಲಾಗಿತ್ತು, ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Laxmi News 24×7