Breaking News

ಬಿಜೆಪಿ ವಿಕೆಟ್‌‍‌ಗಳು ಪತನ, ಬಾಬಾ ಸಿಎಂಗೆ ಕ್ರಿಕೆಟ್ ಆಡಲು ಬರುವುದಿಲ್ಲ: ಅಖಿಲೇಶ್

Spread the love

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವಂತೆಯೇ ಆಡಳಿತರೂಢ ಬಿಜೆಪಿ ಶಾಸಕರು, ಒಬ್ಬರ ನಂತರ ಒಬ್ಬರಂತೆ ಪಕ್ಷವನ್ನು ತೊರೆದು ಸಮಾಜವಾದಿ ಪಕ್ಷ (ಎಸ್‌ಪಿ) ಸೇರುತ್ತಿದ್ದಾರೆ.

ಇದನ್ನೇ ಉಲ್ಲೇಖ ಮಾಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಬಿಜೆಪಿ ವಿಕೆಟ್‌ಗಳು ಪತನಗೊಳ್ಳುತ್ತಿವೆ, ಬಾಬಾ ಸಿಎಂಗೆ ಕ್ರಿಕೆಟ್ ಆಡಲು ಬರುವುದಿಲ್ಲ.

ಒಂದು ವೇಳೆ ಗೊತ್ತಿದ್ದರೂ ಕ್ಯಾಚ್ ಕೈಚೆಲ್ಲುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಡಿರುವ ’80 ವರ್ಸಸ್ 20 ಸ್ಪರ್ಧೆ’ (ಹಿಂದೂ ವರ್ಸಸ್ ಮುಸ್ಲಿಂ) ಹೇಳಿಕೆಗೆ ತಿರುಗೇಟು ನೀಡಿರುವ ಅಖಿಲೇಶ್, ಆದಿತ್ಯನಾಥ್ ಗಣಿತ ಶಿಕ್ಷಕರಾಗಬೇಕು ಎಂದು ಹೇಳಿದರು.

ಸ್ವಾಮಿ ಪ್ರಸಾದ್ ಮೌರ್ಯ ಸೇರಿದಂತೆ ಇತರೆ ನಾಯಕರ ಸೇರ್ಪಡೆಯೊಂದಿಗೆ ಬಿಜೆಪಿ ಈಗ ಉಳಿದಿರುವ ಶೇ 20 ಕೂಡ ಕಳೆದುಕೊಳ್ಳಲಿದೆ. ಬಾಬಾ ಸಿಎಂ ಸಂಪೂರ್ಣ ವೈಫಲ್ಯ ಕಂಡಿದ್ದಾರೆ. ದೆಹಲಿಯಿಂದ ಯಾರೇ ಬಂದರೂ ಅವರು ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದಿಲ್ಲ ಎಂದು ಹೇಳಿದರು.

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರಾದ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಮತ್ತು ಇನ್ನೂ ಐವರು ಬಿಜೆಪಿ ಶಾಸಕರು ಸಮಾಜವಾದಿ ಪಕ್ಷ ಸೇರಿದ್ದಾರೆ.

ವರ್ಚುವಲ್ ಆಗಿ ಕಾರ್ಯಕ್ರಮ ನಡೆದರೂ ಸಮಾಜವಾದಿ ಪಕ್ಷದ ಪ್ರಧಾನ ಕಚೇರಿ ಸಮೀಪದಲ್ಲಿ 2,000ಕ್ಕೂ ಹೆಚ್ಚು ಮಂದಿ ಬೆಂಬಲಿಗರು ಜಮಾಯಿಸಿದ್ದರು. ಇದರಂತೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ