Breaking News

ಸಂಕ್ರಾಂತಿ ಹಿನ್ನೆಲೆ ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರುಪಾಲು

Spread the love

ರಾಯಚೂರು: ಕೃಷ್ಣಾ ನದಿಗೆ ಸ್ನಾನಕ್ಕೆ ತೆರಳಿದ ಇಬ್ಬರು ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ತಾಲೂಕಿನ ಶಕ್ತಿನಗರದ ಬಳಿಯ ಕೃಷ್ಣಾ ಸೇತುವೆ ಬಳಿ ಶನಿವಾರ ಈ ದುರ್ಘಟನೆ ಸಂಭವಿಸಿದೆ.

ರಾಯಚೂರು ನಗರದ ಕೆಇಬಿ ಕಾಲೋನಿಯ ಗಣೇಶ್(40), ಉದಯಕುಮಾರ್ (38) ಮೃತ ವ್ಯಕ್ತಿಗಳೆಂದು ಗುರುತಿಸಲಾಗಿದೆ. ಗಣೇಶ್​​ ಮೃತದೇಹ ಪತ್ತೆಯಾಗಿದ್ದು, ಉದಯಕುಮಾರ್ ಶವಕ್ಕಾಗಿ ನದಿಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದೆ.ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಶುಕ್ರವಾರದಂದು ನದಿಗೆ ಇಬ್ಬರು ಸ್ನಾಕ್ಕೆ ತೆರಳಿದ್ದರು. ಆದರೆ ಈ ವೇಳೆ, ಕಾಲು ಜಾರಿ ಬಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ