Breaking News

ಮಂತ್ರಿ ಗೋಳ ಮನೆ ಮುಂದ ಗುಂಡಿ ಬಿದ್ದು ಹೋದರು ರಿಪೇರಿ ಮಾಡದ ಅಧಿಕಾರಿ ವರ್ಗ

Spread the love

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಅವರು ಓಡಾಡುವ ರಸ್ತೆಯಲ್ಲಿ ಗುಂಡಿ ಬಿದ್ದು ಅವ್ಯವಸ್ಥೆ ತಲೆದೋರಿದೆ. ಆದರೂ ಯಾವೊಬ್ಬ ಅಧಿಕಾರಿಯೂ ಇದರ ದುರಸ್ತಿಗೆ ಮುಂದಾಗಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಅವರ ಮನೆಯ ಹತ್ತಿರದಲ್ಲಿರುವ ರಸ್ತೆಯಲ್ಲಿ ಡ್ರೈನೇಜ್ ಹೋಲ್ ಕಳಪೆ ಕಾಮಗಾರಿಯಿಂದ ಸುಮಾರು 15 ಅಡಿಗಳಷ್ಟು ತಗ್ಗು ಬಿದ್ದಿದೆ. ಇದರಿಂದ ಜನರು ಸಂಚರಿಸಲು ಪರದಾಡುತ್ತಿದ್ದು, ಜನಪ್ರತಿನಿಧಿಗಳಾಗಲಿ, ಪಾಲಿಕೆ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ. ಇದರಿಂದ ಕೋಪಗೊಂಡ ಜನರು ಅಸಮಾಧಾನ ಹೊರ ಹಾಕಿದ್ದಾರೆ.

ಇದರಿಂದ ಯಾವುದೇ ಅಪಾಯ ಆಗದಂತೆ ಜನರೇ ಸ್ವಯಂ ಪ್ರೇರಿತರಾಗಿ ಬ್ಯಾರಿಕೇಡ್​ ಹಾಕಿ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಸೂಚನೆ ನೀಡುತ್ತಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ