Breaking News

ಸಿಎಂ ಜೊತೆ ಚರ್ಚಿಸಿ ಹಾಲಿನ ದರ ಏರಿಕೆ, ನಿರ್ಧಾರ: ಬಾಲಚಂದ್ರ ಜಾರಕಿಹೊಳಿ

Spread the love

ಬೆಂಗಳೂರು: ‘ನಂದಿನಿ’ ಹಾಲಿನ ದರ ಏರಿಕೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು’ ಎಂದು ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

 

ಕೆಎಂಎಫ್ 2020-21ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ‘ಹಾಲಿನ ದರ ಪ್ರತಿ ಲೀಟರ್‌ಗೆ ₹ 3 ಹೆಚ್ಚಿಸಲು ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಕೋರಿದ್ದಾರೆ’ ಎಂದು ತಿಳಿಸಿದರು.

‘ಹೆಚ್ಚಿಸಿದರೆ ಲೀಟರ್ ಹಾಲಿಗೆ ಈಗಿರುವ ₹ 37ರಿಂದ ₹ 40 ದರ ಆಗಲಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ದರ ಅತಿ ಕಡಿಮೆ ಇದೆ. ದರ ಹೆಚ್ಚಿಸಿದರೆ ಆ ಹಣವನ್ನು (₹ 3) ರೈತರಿಗೆ ನೀಡಲಾಗುವುದು’ ಎಂದೂ ಹೇಳಿದರು.

‘ಪ್ರಸಕ್ತ ವರ್ಷ (2021-22) ಕೆಎಂಎಫ್‌ನ 5 ಪಶು ಆಹಾರ ಘಟಕಗಳಿಂದ 7.28 ಲಕ್ಷ ಟನ್ ಪಶು ಆಹಾರ ಉತ್ಪಾದಿಸಿ ಮಾರಾಟ ಮಾಡುವ ಗುರಿ ಇದೆ. ಅಂದಾಜು ₹1,017 ಕೋಟಿ ವಹಿವಾಟು ನಿರೀಕ್ಷೆ ಇದೆ’ ಎಂದರು.

‘ಬೆಳಗಾವಿಯಲ್ಲಿ ನಂದಿನಿ ಮೆಗಾ ಫುಡ್ ಪಾರ್ಕ್‌ ಆರಂಭಿಸುವ ಕಾರ್ಯ ಪ್ರಗತಿಯಲ್ಲಿದೆ. ಹೊರರಾಜ್ಯಗ ಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಸಮಗ್ರ ಮಾರುಕಟ್ಟೆ ಅಭಿವೃದ್ಧಿ ಯೋಜನೆ- 2022-2026 ರೂಪಿಸಲಾಗಿದೆ’ ಎಂದರು.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ