Breaking News

ಬೆಳಗಾವಿಯಲ್ಲಿ ಚುಚ್ಚುಮದ್ದು ಪಡೆದಿದ್ದ ಮೂವರು ಮಕ್ಕಳು ನಿಗೂಢ ಸಾವನ್ನಪ್ಪಿದ್ದಾ

Spread the love

ಬೆಳಗಾವಿ: ಬೆಳಗಾವಿಯಲ್ಲಿ ಚುಚ್ಚುಮದ್ದು ಪಡೆದಿದ್ದ ಮೂವರು ಮಕ್ಕಳು ನಿಗೂಢ ಸಾವನ್ನಪ್ಪಿದ್ದಾರೆ.ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ್ (13 ತಿಂಗಳು), ಮಧು ಉಮೇಶ್ ಕುರಗುಂದಿ (14 ತಿಂಗಳು) ರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಚೇತನ(1.5) ಮೃತ ದುರ್ದೈವಿಗಳು.

 

ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಗಮಿಸಿದ ಸಿಬ್ಬಂದಿ ಮಕ್ಕಳಿಗೆ ಚುಚ್ಚುಮದ್ದು​ ನೀಡಿದ್ದರು. ಈ ವೇಳೆ ಅಸ್ವಸ್ಥಗೊಂಡಿದ್ದ ಮಗುವಿಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಜನವರಿ 13ರಂದು ಒಂದು ಮಗು ಸಾವನ್ನಪ್ಪಿದ್ದು, ಇಂದು ಎರಡು ಮಕ್ಕಳು ಸಾವನ್ನಪ್ಪಿವೆ.ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ ಏಕಕಾಲಕ್ಕೆ ಕೋವಿಡ್ ವ್ಯಾಕ್ಸಿನ್ ಮತ್ತು ಚಿಕ್ಕಮಕ್ಕಳಿಗೆ ಚುಚ್ಚುಮದ್ದು ನೀಡುತ್ತಿದ್ದರು. ಚುಚ್ಚುಮದ್ದು ಬಳಿಕ ಮಕ್ಕಳಲ್ಲಿ ವಾಂತಿ ಭೇದಿ ಆರಂಭವಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ