ಶಿವಮೊಗ್ಗ : 19 ವಿದ್ಯಾರ್ಥಿಗಳು ಹಾಗೂ ಐವರು ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಭದ್ರಾವತಿ ತಾಲ್ಲೂಕು ಶಂಕರಘಟ್ಟದಲ್ಲಿನ ಕುವೆಂಪು ವಿಶ್ವವಿದ್ಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ.
ಇಲ್ಲಿನ ಗ್ರಂಥಾಲಯ ಮತ್ತು ವಸತಿನಿಲಯದ ಕೆಲವು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಲಪತಿಯವರ ಆದೇಶದ ಮೇರೆಗೆ ವಿಶ್ವವಿದ್ಯಾಲಯ ಸೀಲ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ.
ಜ್ಞಾನ ಸಹ್ಯಾದ್ರಿ ಆವರಣದಲ್ಲಿನ ಎಲ್ಲಾ ಸ್ನಾತಕೋತ್ತರ ಪದವಿ ತರಗತಿಗಳಿಗೆ ಜನವರಿ 17 ರಿಂದ 21 ರವರೆಗೆ ರಜೆ ಘೋಷಣೆ ಮಾಡಲಾಗಿದೆ.
ಅಲ್ಲದೆ ಬೋಧಕ ಸಿಬ್ಭಂದಿಗಳಿಗೆ ಆನ್ ಲೈನ್ ಮೂಲಕ ತರಗತಿ ನಡೆಸುವಂತೆ ನಿರ್ದೇಶನ ನೀಡಲಾಗಿದೆ.