Breaking News

ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರ ಸರ್ಕಾರ ಕ್ಷಮೆ ಕೇಳಬೇಕು: ಸಿದ್ದರಾಮಯ್ಯ

Spread the love

ಬೆಂಗಳೂರು : ಈ ಬಾರಿಯ ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಸಮಾಜ ಸುಧಾರಕನನ್ನು ಅವಮಾನಿಸಿದ ಕಾರಣಕ್ಕೆ ದೇಶದ ಜನರ ಕ್ಷಮೆ ಯಾಚಿಸಿ, ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ತಳಸಮುದಾಯದ ಮಹಾಪುರುಷರ ಬಗ್ಗೆ ಬಿಜೆಪಿ ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಸಾಕ್ಷಿ.ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ? ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ?
ಅಂತಹ ಅಭಿಪ್ರಾಯವನ್ನು ಬಿಜೆಪಿ ಪಕ್ಷ ಹೊಂದಿದ್ದರೆ ಹಾಗೆಂದು ಮುಕ್ತವಾಗಿ ಹೇಳುವ ಧೈರ್ಯ ತೋರಲಿ ಎಂದಿದ್ದಾರೆ.

ಹಿಂದೂ ಧರ್ಮದ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿ ಅವಮಾನಿಸಿರುವುದು ‘ಹಿಂದು ಹೃದಯ ಸಾಮ್ರಾಟ’ ಎಂದು ಕರೆಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಇ‌ನ್ನೂ ಬಂದಿಲ್ಲವೇ? ಶತಮಾನದ ಹಿಂದೆಯೇ ಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ಮೂಗಿನಡಿಯಲ್ಲಿಯೇ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಪ್ರತಿಕ್ರಿಯಿಸದೆ ಇರುವುದು ಆಶ್ಚರ್ಯಕರ.ಇದನ್ನು ಹೇಗೆ ಅರ್ಥೈಸಬೇಕು? ಈ ಅವಮಾನಕ್ಕೆ ಸಹಮತ ಇದೆಯೆಂದೇ? ನಾನು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸಬೇಕೆಂಬ ನಿರ್ಧಾರ ಕೈಗೊಂಡೆ.ಇದರಿಂದಾಗಿ ಇಂದು ರಾಜ್ಯದ ಮೂಲೆಮೂಲೆಗೆ ಗುರುಗಳ ಚಿಂತನೆಯ ಸಂದೇಶ ತಲುಪುತ್ತಿದೆ‌ ಎಂಬ ಹೆಮ್ಮೆ ಮತ್ತು ತೃಪ್ತಿ ನನ್ನದು.ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ