ಬೆಳಗಾವಿ: ಜ.13ರಂದು ರಮೇಶ್ ಮಾದಿಗರ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ರಮೇಶ್ ಹತ್ಯೆಗೈದಿದ್ದ ಪತ್ನಿ ಶ್ರೀದೇವಿ ಮಾದಿಗರ(30) ಮತ್ತು ಪ್ರಿಯಕರ ಬಸವರಾಜ ಹರಿಜನ(20)ನನ್ನು ಬೆಳಗಾವಿ ಜಿಲ್ಲೆ ಕಿತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜನವರಿ 13ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಕ್ರಾಸ್ ಬಳಿ ರಮೇಶ್ ಮಾದಿಗರ ಶವ ಪತ್ತೆಯಾಗಿತ್ತು. ಈ ಹಿನ್ನೆಲೆ ಕೊಲೆಯ ಆರೋಪಿಗಳಿಗಾಗಿ ಬಲೆ ಬೀಸಿದ್ದ ಪೊಲೀಸರಿಗೆ ಬೆಚ್ಚಿಬೀಳಿಸುವ ಸಂಗತಿ ಬಯಲಾಗಿದೆ. ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿಯೇ ಪ್ಲ್ಯಾನ್ ರೂಪಿಸಿದ್ದಾಳೆ. ಶ್ರೀದೇವಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕ ಬಸವರಾಜ ಶ್ರೀದೇವಿಯ ಪತಿಯ ಕೊಲೆ ಮಾಡಿದ್ದಾನೆ. ರಮೇಶ್ ಮಾದಿಗರ ಗುಪ್ತಾಂಗಕ್ಕೆ ಒದ್ದು, ಕತ್ತು ಹಿಸುಕಿ ಬಸವರಾಜ್ ಹತ್ಯೆಗೈದಿದ್ದ. ಬಳಿಕ ಶ್ರೀದೇವಿಗೆ ಹತ್ಯೆ ವಿಚಾರ ತಿಳಿಸಿ ಪರಾರಿಯಾಗಿದ್ದ. ಸದ್ಯ ಕಿತ್ತೂರು ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.