Breaking News

ಬಿಜೆಪಿ ಶಾಸಕ ಅನಿಲ್‌ ಬೆನಕೆ ಮತ್ತೆ ಕೋವಿಡ್ ರೂಲ್ಸ್ ಬ್ರೇಕ್

Spread the love

ಬೆಳಗಾವಿ: ಇಲ್ಲಿನ ಉತ್ತರ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್‌ ಬೆನಕೆ ಮತ್ತೆ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದಾರೆ. ವೀಕೆಂಡ್ ಕರ್ಫ್ಯೂ ದಿನವೇ ಧರ್ಮವೀರ ಸಂಭಾಜಿ ಪಾಟೀಲ್​ ಪ್ರತಿಮೆಗೆ ಅಭಿಷೇಕ ಮಾಡಿದ್ದಾರೆ.

ಧರ್ಮವೀರ ಸಂಭಾಜಿ ವೃತ್ತದಲ್ಲಿರುವ ಸಂಭಾಜಿ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು. ಮಾಸ್ಕ್ ಹಾಕದೆ ಒಂದೇ ಕಡೆ 20ಕ್ಕೂ ಹೆಚ್ಚು ಜನರು ಜಮಾವಣೆಗೊಂಡಿದ್ದರು. ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಹೀಗಿದ್ದರೂ ಆಡಳಿತ ಪಕ್ಷದ ಶಾಸಕನೇ ಕೋವಿಡ್ ನಿಯಮ ಉಲ್ಲಂಘಿಸಿರುವುದಕ್ಕೆ ಜನ ಕಿಡಿಕಾರಿದ್ದಾರೆ.

 ಎರಡು ದಿನಗಳ ಹಿಂದೆ ಎಮ್ಮೆ ಓಡಿಸುವ ಸ್ಪರ್ಧೆಗೆ ಚಾಲನೆ ನೀಡಿದ್ದ ಅನಿಲ್ ಬೆನಕೆ, ಸಾವಿರಾರು ಜನರನ್ನು ಜಮಾವಣೆಗೊಳಿಸಿದ್ದರು. ಇದೀಗ ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೊಂದು ನ್ಯಾಯವೇ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರ ವಿರುದ್ಧ ಬೆಳಗಾವಿ ಪೊಲೀಸರು ಯಾವುದೇ ದೂರನ್ನು ಇದುವರೆಗೂ ದಾಖಲಿಸಿಲ್ಲ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ