Breaking News

ಇತಿಹಾಸ ಮರುಕಳಿಸುತ್ತದೆ ಎಂಬುದನ್ನು ಕೊನೆಗೂ ಭಕ್ತರು ಸಾಬೀತುಪಡಿಸಿದ್ದಾರೆ.

Spread the love

ಬಾಗಲಕೋಟೆ: ಇತಿಹಾಸ ಮರುಕಳಿಸುತ್ತದೆ ಎಂಬುದನ್ನು ಕೊನೆಗೂ ಭಕ್ತರು ಸಾಬೀತುಪಡಿಸಿದ್ದಾರೆ. ಇತಿಹಾಸದಲ್ಲಿ ಎಂದೂ ರದ್ದಾಗದ ರಥೋತ್ಸವವನ್ನು ಈ ಸಲವೂ ನಡೆಸುವ ಮೂಲಕ ಇದು ಚರಿತ್ರೆ ಸೃಷ್ಟಿಸೋ ಅವತಾರ ಎಂದು ಸಾರಿದ್ದಾರೆ.

ತಡೆಯಲು ನಿಂತ ಪೊಲೀಸರು ಕೊನೆಗೂ ಸಾಲು ಸಾಲು ಎತ್ತಿನ ಬಂಡಿಗೆ, ಸಹಸ್ರಾರು ಭಕ್ತರ ದಂಡಿಗೆ ದಂಗಾಗಿ ಪಕ್ಕಕ್ಕೆ ಸರಿದು ದಾರಿ ಬಿಟ್ಟಿದ್ದಾರೆ.

ಪೊಲೀಸರ ಸರ್ಪಗಾವಲನ್ನೂ ದಾಟಿ ನುಗ್ಗಿದ ಭಕ್ತರು ಕೊನೆಗೂ ತೇರನ್ನು ಎಳೆದಿದ್ದಾರೆ.

ಹೌದು.. ಕರೊನಾತಂಕ, ಕೋವಿಡ್ ನಿರ್ಬಂಧದ ನಡುವೆಯೂ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿಯಲ್ಲಿ ರಥೋತ್ಸವ ಭರ್ಜರಿಯಾಗಿ ನೆರವೇರಿದೆ. ಕರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಥೋತ್ಸವವನ್ನು ರದ್ದುಗೊಳಿಸಿದ್ದರೂ ಸಾವಿರಾರು ಭಕ್ತರು ಜಮಾಯಿಸಿ ತೇರನ್ನು ಎಳೆದೇ ಬಿಟ್ಟಿದ್ದಾರೆ.ಭಕ್ತರನ್ನು ತಡೆಯಲು ಪೊಲೀಸರು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. 


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ