Breaking News

ಗೋವಾ; ಉತ್ಪಲ್ ಪರಿಕ್ಕರ್‌ಗೆ ಎಲ್ಲಾ ವಿರೋಧ ಪಕ್ಷಗಳ ಬೆಂಬಲ?

Spread the love

ಣಜಿ, ಜನವರಿ 18; “ಬಿಜೆಪಿಯೇತರ ಪಕ್ಷಗಳು ದಿ. ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಬೆಂಬಲಿಸಬೇಕು” ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಕರೆ ನೀಡಿದ್ದಾರೆ. ಫೆಬ್ರವರಿ 14ರಂದು ನಡೆಯುವಗೋವಾವಿಧಾನಸಭೆ ಚುನಾವಣೆಗೆ ಉತ್ಪಲ್ ಪರಿಕ್ಕರ್ ಬಿಜೆಪಿ ಟಿಕೆಟ್ ಆಕಾಂಕ್ಷಿ.

ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ಗೆ ತಿರುಗೇಟು ನೀಡುವಂತೆ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. “ಗೋವಾದ ಎಲ್ಲ ವಿರೋಧ ಪಕ್ಷಗಳು ಉತ್ಪಲ ಪರಿಕ್ಕರ್ ಪಣಜಿ ಕ್ಷೇತ್ರದಿಂದ ಕಣಕ್ಕಿಳಿಯುವುದನ್ನು ಬೆಂಬಲಿಸಬೇಕು. ಯಾವ ಪಕ್ಷಗಳು ಸಹ ಅವರ ವಿರುದ್ಧ ಅಭ್ಯರ್ಥಿ ಹಾಕಬಾರದು” ಎಂದು ಕರೆ ನೀಡಿದ್ದಾರೆ.

ಬಿಜೆಪಿ ಉತ್ಪಲ್ ಪರಿಕ್ಕರ್‌ಗೆ ಟಿಕೆಟ್ ನೀಡುವ ಸಾಧ್ಯತೆ ಕಡಿಮೆ ಇದೆ. ಪಣಜಿ ಕ್ಷೇತ್ರದಿಂದ ಬಾಬೂಶ್ ಮೊನ್ಸೆರಾತ್ ಟಿಕೆಟ್ ಪಡೆಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಜನವರಿ 12ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಉತ್ಪಲ್ ಪರಿಕ್ಕರ್ ಟಿಕೆಟ್‌ಗಾಗಿ ಮನವಿ ಮಾಡಿದ್ದರು.

ದಿ. ಮನೋಹರ್ ಪರಿಕ್ಕರ್ ಪ್ರತಿನಿಧಿಸುತ್ತಿದ್ದ ಗೋವಾದ ರಾಜಧಾಣಿ ಪಣಜಿ ಕ್ಷೇತ್ರದಿಂದಲೇ ಉತ್ಪಲ್ ಪರಿಕ್ಕರ್ ಟಿಕೆಟ್ ಬಯಸಿದ್ದಾರೆ. ಬಿಜೆಪಿ ಟಿಕೆಟ್‌ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವರು ಬಯಸಿದ್ದು, ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ

Spread the love ಬೆಂಗಳೂರು: ಮೈಕ್ರೋ ಫೈನಾನ್ಸಿಯರ್​ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ