Breaking News

ರೈಲು ನಿಲ್ದಾಣದಲ್ಲಿ ಹೃದಯಾಘಾತದಿಂದ ಮೃತಪಟ್ಟ ಭೋಜ ಗ್ರಾಮದ ಯೋಧ

Spread the love

ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ಯೋಧರೊಬ್ಬರು ಪಂಜಾಬ್‍ನ ಪಠಾಣ್‍ಕೋಟ್ ರೈಲು ನಿಲ್ದಾಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ವಿನಯ  ಬಾಬಾಸಾಹೇಬ ಭೋಜೆ (37) ಎನ್ನುವ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಯೋಧನ ಸಾವಿನ ಸುದ್ದಿ ಕೇಳಿ ಭೋಜ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ವಿನಯ್ ಭೋಜೆ ಹದಿನೇಳು ವರ್ಷಗಳ ಹಿಂದೆ ಭಾರತೀಯ ಸೇನೆಗೆ ಸೇರ್ಪಡೆಗೊಂಡಿದ್ದರು.

ಕಳೆದ ಹತ್ತು ವರ್ಷಗಳಿಂದ ಅವರು ಮಹಾರಾಷ್ಟ್ರದ ಹಾತಕಣಗಲೆ ತಾಲೂಕಿನ ತಿಲವಾಣಿ ಗ್ರಾಮದಲ್ಲಿ ನೆಲೆಸಿದ್ದರು. ಕಳೆದ ವಾರ ರಜೆಗೆಂದು ತಿಲವಾಣಿಗೆ ಬಂದಿದ್ದರು. ರಜೆ ಮುಗಿಸಿ ಪಠಾಣ್ ಕೋಟ್ ಗೆ ವಾಪಸಾಗಿದ್ದರು. ರೈಲು ನಿಲ್ದಾಣದಲ್ಲಿ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಸೈನಿಕ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ