ಪಕ್ಷದ ವರಿಷ್ಟರು ನನಗೆ ಯಾವುದೇ ಜವಾಬ್ದಾರಿಯನ್ನು ವಹಿಸಿದರೂ ನಾನು ನಿಭಯಿಸಲು ಸಿದ್ಧನಿದ್ದೇನೆ ಎಂದು ಶಾಸಕ ಮಹೇಶ್ ಕುಮಠಳ್ಳಿ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ತಮ್ಮ ಮನದ ಆಶಯವನ್ನು ಬಿಚ್ಚಿಟ್ಟಿದ್ದಾರೆ.
ಚಿಕ್ಕೋಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಮಹೇಶ್ ಕುಮಠಳ್ಳಿ, ಪಕ್ಷದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರು ಯಾವುದೇ ಜವಾಬ್ದಾರಿಯನ್ನು ನೀಡಿದರೂ ನಾನು ನಿಭಾಯಿಸಲು ಸಿದ್ಧನಿದ್ದೇನೆ. ಹಾಗಂತ ನಾನೇನೂ ಒತ್ತಾಯ ಮಾಡುವುದಿಲ್ಲ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದಿಯಾಗಿ, ಕೇಂದ್ರ ನಾಯಕರು ಜವಾಬ್ದಾರಿ ನೀಡಿದರೆ ನಾನು ನಿಭಾಯಿಸಲು ಸಿದ್ಧನಿದ್ದೇನೆ ಎಂದರು.
ಇನ್ನು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ. 2023ರ ವರೆಗೂ ಬವರಾಜ ಬೊಮ್ಮಾಯಿಯವರೇ ರಾಜ್ಯದಲ್ಲಿ ಮುಖ್ಯಮಂತ್ರಿಗಳಾಗಿರುತ್ತಾರೆ. ಇನ್ನು 2023ರ ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸಲಾಗುವುದು ಎಂದರು.
Laxmi News 24×7