ಕಲಬುರಗಿ: : ಕೊರೊನಾ ಹೆಚ್ಚಳವಾದ ಹಿನ್ನೆಲೆ ಮಹಾರಾಷ್ಟ್ರ- ಕರ್ನಾಟಕ ಗಡಿಗಳಲ್ಲಿ ಜಿಲ್ಲಾಡಳಿತ ಬಿಗಿ ಭದ್ರತೆ ಕೈಗೊಂಡಿದ್ದು, ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರು ಕರ್ನಾಟಕ ಪ್ರವೇಶ ನೀಡುವಂತೆ ಚೆಕ್ ಪೋಸ್ಟ್ಗಳಲ್ಲಿ ಗಲಾಟೆ ಮಾಡುತ್ತಿದ್ದಾರೆ.
ಕಲಬುರಗಿ ಜಿಲ್ಲೆಯ ಗಡಿಗಳಲ್ಲಿ ಜಿಲ್ಲಾಡಳಿತ ಬಿಗಿ ಭದ್ರತೆ ಕೈಗೊಂಡಿದೆ. ಅಫಜಲಪೂರ ತಾಲೂಕಿನ ಬಳ್ಳೂರಗಿ ಚೆಕ್ ಪೋಸ್ಟ್ನಲ್ಲಿ ಮಹಾರಾಷ್ಟ್ರದ ಪ್ರಯಾಣಿಕರು ಗಲಾಟೆ ಮಾಡುತ್ತಿದ್ದಾರೆ ಎಂದು ಪೊಲೀಸ್ ಸಿಬ್ಬಂದಿ ಆರೋಪಿಸುತ್ತಿದ್ದಾರೆ.
ಆರ್ಟಿಪಿಸಿಆರ್ ವರದಿ ಇಲ್ಲದಿದ್ರು ಜಿಲ್ಲೆಗೆ ಪ್ರವೇಶ ನೀಡುವಂತೆ ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ಜೊತೆ ಪ್ರಯಾಣಿಕರು ಗಲಾಟೆ ಮಾಡುತ್ತಿದ್ದಾರೆ. ಎರಡು ಡೋಸ್ ಲಸಿಕೆ ಪಡೆದಿದ್ದೇವೆ. ನಮಗೆ ಪ್ರವೇಶ ಕೊಡಿ ಎಂದು ಜನ ಗಲಾಟೆ ಮಾಡುತ್ತಿದ್ದಾರೆ.

ಗಲಾಟೆ ಮಾಡಿ ಕರ್ನಾಟಕ ಪ್ರವೇಶ ಮಾಡುತ್ತಿರುವ ಪ್ರಯಾಣಿಕರು
ಎಷ್ಟೇ ಹೇಳಿದ್ರು ಕೇಳದೇ ಕೊನೆಗೆ ಬ್ಯಾರಿಕೇಡ್ ಕಿತ್ತು ಹಾಕಿ ಜಿಲ್ಲೆಯ ಒಳ ಹೋಗಿದ್ದಾರೆ ಎಂದು ಪೊಲೀಸ್ ಸಿಬ್ಬಂದಿ ಆರೋಪಿಸಿದ್ದಾರೆ.