Breaking News

ಫೆಬ್ರವರಿಯಲ್ಲಿ ಸೋಂಕು ಇಳಿಮುಖವಾಗಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ: ಪ್ರಹ್ಲಾದ್ ಜೋಶಿ

Spread the love

ಹುಬ್ಬಳ್ಳಿ: ಜನವರಿ ಅಂತ್ಯಕ್ಕೆ ಕೋವಿಡ್ ಗರಿಷ್ಠ ಮಟ್ಟ ತಲುಪುವ ಸಂಭವವಿದೆ. ಫೆಬ್ರವರಿಯಲ್ಲಿ ಸೋಂಕು ಇಳಿಮುಖವಾಗಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆ ಎದುರಿಸಲು ಸಮರ್ಪಕ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್ ಆವರಣದಲ್ಲಿ ಕೋವಿಡ್​ 3ನೇ ಅಲೆ ನಿಯಂತ್ರಣ ಹಾಗೂ ಸಿದ್ಧತೆ ಸಭೆ ಬಳಿಕ ಮಾತನಾಡಿದ ಅವರು, ಜನರು ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಕೋವಿಡ್ ಮೊದಲ ಮತ್ತು ಎರಡನೇ ಅಲೆಯಲ್ಲಿ ವಿಶ್ವಾಸ ಮೂಡಿಸಿಕೊಂಡಿದ್ದಾರೆ. ಮೂರನೇ ಅಲೆಯಲ್ಲಿ ಈ ನಂಬಿಕೆ ಉಳಿಸಿಕೊಳ್ಳುವಂತಹ ಪ್ರಾಮಾಣಿಕ ಕರ್ತವ್ಯ ನಿರ್ವಹಿಸಬೇಕು. ಈ ಅಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸರಾಸರಿ ಪ್ರಮಾಣ ಬಹಳ ಕಡಿಮೆಯಿದೆ.

ಮನೆಯಲ್ಲಿಯೇ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಅವರಿಗೆ ಸಕಾಲದಲ್ಲಿ ಔಷಧಿಗಳ ಕಿಟ್ ಮತ್ತು ಆಪ್ತ ಸಮಾಲೋಚನೆ ಮೂಲಕ ಸಲಹೆಗಳು ಸಿಗಬೇಕು. ಜಿಲ್ಲಾಸ್ಪತ್ರೆ, ಕಿಮ್ಸ್ ಹಾಗೂ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ ವೈದ್ಯಕೀಯ ಆಕ್ಸಿಜನ್ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.


Spread the love

About Laxminews 24x7

Check Also

5 ತಾಲೂಕುಗಳ ಶಾಲೆಗೆ ಇಂದು ರಜೆ ಘೋಷಣೆ

Spread the loveಮಂಗಳೂರು/ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್​ 29(ಶುಕ್ರವಾರ) ರಂದು ಜಿಲ್ಲೆಯ ಶಾಲೆ, ಪ್ರೌಢಶಾಲೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ