Breaking News

ಆಸ್ತಿಗೆ ಸಂಬಂಧಿಸಿದ ಕೆಲಸಕ್ಕೆ ₹ 10ಸಾವಿರದಿಂದ ₹ 15ಸಾವಿರ ಲಂಚ ಕೇಳುತ್ತಾರೆ

Spread the love

ತೆಲಸಂಗ: ಅರಟಾಳ ಗ್ರಾಮ ಪಂಚಾಯ್ತಿಯಿಂದ ಮಂಗಳವಾರ ನಡೆದ ಗ್ರಾಮಸಭೆಯಲ್ಲಿ ಜನರು ಗ್ರಾಮ ಲೆಕ್ಕಾಧಿಕಾರಿ ವಿರುದ್ದ ಆರೋಪಗಳ ಸುರಿಮಳೆಗೈದರು.

 

ಶಿವಾನಂದ ಭಂಡಾರಿ, ಅಶೋಕ ಆನಗೊಂಡಿ, ಭೀಮಪ್ಪ ಭಂಡಾರಿ ಮಾತನಾಡಿ, ‘ಗ್ರಾಮ ಲೆಕ್ಕಾಧಿಕಾರಿ ಇರ್ಫಾನ್‌ ಆಲಗೂರ ಪ್ರತಿಯೊಂದಕ್ಕೂ ಹಣ ಕೇಳುತ್ತಾರೆ.

ಆಸ್ತಿಗೆ ಸಂಬಂಧಿಸಿದ ಕೆಲಸಕ್ಕೆ ₹ 10ಸಾವಿರದಿಂದ ₹ 15ಸಾವಿರ ಲಂಚ ಕೇಳುತ್ತಾರೆ. ಅವರನ್ನು ವರ್ಗಾಯಿಸಿ ದಕ್ಷ ಅಧಿಕಾರಿ ಹಾಕಬೇಕು’ ಎಂದು ಒತ್ತಾಯಿಸಿದರು.

 

‘ಗ್ರಾಮ ಲೆಕ್ಕಾಧಿಕಾರಿಯಿಂದ ಯಾವುದೇ ದಾಖಲಾತಿ ಪಡೆಯಲು ರೈತರು ಹರಸಾಹಸ ಪಡಬೇಕಾಗಿದೆ. ಹಣ ಕೊಡದಿದ್ದರೆ ಇಲ್ಲಸಲ್ಲದ ದಾಖಲಾತಿ ಬೇಕೆಂದು ಹೇಳಿ ಅಲೆದಾಡಿಸುತ್ತಾರೆ. ಜನರನ್ನು ಸೌಜನ್ಯದಿಂದ ಮಾತನಾಡಿಸುವುದಿಲ್ಲ’ ಎಂದು ಆರೋಪಿಸಿದರು.

 

ದನಿಗೂಡಿಸಿದ ಗ್ರಾ.ಪಂ. ಸದಸ್ಯ ಏಕನಾಥ ಕಾಂಬಳೆ, ‘ಇಂತಹ ಅಧಿಕಾರಿಗಳು ನಮಗೆ ಬೇಡ’ ಎಂದರು.

 

‘ಗ್ರಾಮದಲ್ಲಿ ಕುಡಿಯುವ ನೀರಿನ ತೊಂದರೆ ನಿವಾರಿಸಬೇಕು. ಅರಟಾಳ- ಬಾಡಗಿ- ಹಾಲಳ್ಳಿ ಗ್ರಾಮದ ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ನ ಅನಕೂಲ ಮಾಡಿಕೊಡಬೇಕು’ ಎಂದು ಒತ್ತಾಯಿಸಿದರು.

 

ಆ ಅಧಿಕಾರಿ ವರ್ಗಾವಣೆ ಮಾಡುವಂತೆ ಗ್ರಾಮ ಪಂಚಾಯ್ತಿ ಸಭೆಯಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಕಳುಹಿಸಲು ನಿರ್ಧರಿಸಲಾಯಿತು.

 

ಅಧ್ಯಕ್ಷತೆ ವಹಿಸಿದ್ದ ನೋಡಲ್ ಅಧಿಕಾರಿ ಮಹಾಂತೇಶ ಪಾಟೀಲ ಮಾತನಾಡಿದರು. ಪಿಡಿಒ ಎ.ಜಿ. ಎಡಕೆ, ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಕಾಂಬಳೆ, ಉಪಾಧ್ಯಕ್ಷೆ ಕಾಶಿಬಾಯಿ ಹೊನಗೌಡ, ಸದಸ್ಯ ರಾಮಪ್ಪ ಪೂಜಾರಿ, ಸಿದ್ದು ಹಳ್ಳಿ, ಶಿವಾನಂದ ನೇಮಗೌಡ, ಶಂಕರ ಕೆಂಚಗೊಂಡ, ರೇವಪ್ಪ ತೇಲಿ, ಸದಾಶಿವ ಹೊನಗೌಡ, ಬಸವರಾಜ ಫಾಟೀಲ, ಎಂ.ಬಿ. ಚಪ್ಪರ, ಎಸ್.ಎಸ್. ಶಿಂಧೂರ, ಶೋಭಾ

ಪರೀಟ, ದುಂಡಪ್ಪ ಮಾಳಿ, ಅಕ್ಷಯಕುಮಾರ ಉಪಾಧ್ಯೆ, ಡಾ.ರಾಜಶ್ರೀ ಹಿರೇಮಠ, ಡಾ.ವಿ.ಎಸ್. ಸಿಂಧೂರ ಇದ್ದರು.

 

ಆರೋಪ ಸತ್ಯಕ್ಕೆ ದೂರವಾದುದು

 

ಗ್ರಾಮ ಸಭೆಯಲ್ಲಿ ನಾನು ಉತ್ತರ ಕೊಟ್ಟರೆ ಅವರೊಂದು, ನಾನೊಂದು ಮಾತನಾಡಿ ಸಮಸ್ಯೆ ಆಗುತ್ತಿತ್ತು. ಅದಕ್ಕೆ ಸುಮ್ಮನಿದ್ದೆ. ಲಂಚದ ಆರೋಪ ಸತ್ಯಕ್ಕೆ ದೂರವಾಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ