Breaking News

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆ, ತಾಲ್ಲೂಕುಗಳಿಗೆ ಅನುದಾನ ಬಿಡುಗಡೆ

Spread the love

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ ಗಣರಾಜ್ಯೋತ್ಸವ ದಿನದ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ರಾಜಧಾನಿ ಬೆಂಗಳೂರು ನಗರಕ್ಕೆ 25 ಲಕ್ಷ ರೂ, ಉಳಿದಂತೆ ಪ್ರತಿ ಜಿಲ್ಲೆಗೆ ತಲಾ 1 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.

ತಾಲ್ಲೂಕು ಮಟ್ಟದ ಕಾರ್ಯಕ್ರಮಗಳಿಗೆ ತಲಾ 20 ಸಾವಿರ ರೂ. ಬಿಡುಗಡೆ ಮಾಡಲು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಗಣರಾಜ್ಯೋತ್ಸವ ಟ್ಯಾಬ್ಲೋ; ಇಳಕಲ್ ಸೀರೆ, ಗುಳೇದಗುಡ್ಡದ ಖಣ ಆಯ್ಕೆ

ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಇಳಕಲ್ ಸೀರೆಯಂತೆಯೇ, ಗುಳೇದಗುಡ್ಡ ಖಣ ಅಥವಾ ಕುಪ್ಪಸ ಸಹ ಹೆಚ್ಚು ಪ್ರಸಿದ್ಧಿ ಪಡೆದಿದೆ. ಇದೀಗ ಈ ಜೋಡಿಯ ಗೌರವ ಹೆಚ್ಚಾಗಿದ್ದು, ಇಳಕಲ್ ಸೀರೆ ಹಾಗೂ ಗುಳೇದಗುಡ್ಡ ಖಣ ಈ ಬಾರಿಯ ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಆಯ್ಕೆಯಾಗಿದೆ.

ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಬಾಗಲಕೋಟೆ ಜಿಲ್ಲೆಯ ಇಳಕಲ್ ಸೀರೆ ಹಾಗೂ ಗುಳೇದಗುಡ್ಡ ಖಣ ಎರಡು ಆಯ್ಕೆಯಾಗಿದ್ದು, ಸ್ತಬ್ಧಚಿತ್ರಗಳ ವಸ್ತು ಪ್ರದರ್ಶನದಲ್ಲಿ ಮಿಂಚಲಿವೆ.

ಶಾಲಾ- ಕಾಲೇಜುಗಳಲ್ಲಿ ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಣೆ

ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆಯಾಗಿದೆ. ಹೀಗಾಗಿ ಸುಭಾಷ ಚಂದ್ರ ಬೋಸ್‌ರವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ