Breaking News

ಕಳ್ಳ ಸಹೋದರರ ಸೆರೆ: ಐದು ಬೈಕ್‌ ಜಪ್ತಿ

Spread the love

ಕಲಬುರಗಿ: ನಗರದಲ್ಲಿ ಹಾಡು ಹಗಲೇ ಬೈಕ್‌ಗಳ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಸಹೋದರರನ್ನು ಉತ್ತರ ಉಪವಿಭಾಗದ ಚೌಕ್‌ ಠಾಣೆ ಪೊಲೀಸರು ಬಂಧಿಸಿ, 3.5 ಲಕ್ಷ ರೂ. ಮೌಲ್ಯದ ಐದು ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.

ಕಾಳಗಿ ತಾಲೂಕಿನ ಕೊರವಾರ ಗ್ರಾಮದ ವಿಕಾಸ ಹೊಸಮನಿ, ರಾಮಚಂದ್ರ ಹೊಸಮನಿ ಬಂಧಿತ ಸಹೋದರರು. ಬುಧವಾರ ಬೆಳಗ್ಗೆ ತಾಜ್‌ ಸುಲ್ತಾಪುರ ರಸ್ತೆಯಲ್ಲಿ ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ನಲ್ಲಿ ತೆರಳುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ತಡೆದು ವಿಚಾರಣೆ ನಡೆಸಿದಾಗ ಈ ಕಳ್ಳರು ಸಿಕ್ಕಿ ಬಿದ್ದಿದ್ದಾರೆ. ಎಪಿಎಂಸಿ, ವೆಂಕಟೇಶ್ವರ ಶೋ ರೂಂ ಸೇರಿದಂತೆ ಹಲವು ಕಡೆಗಳಲ್ಲಿ ಬೈಕ್‌ಗಳ ಕಳ್ಳತನ ಮಾಡಿರುವುದಾಗಿ ಆರೋಪಿತರು ಬಾಯ್ಬಿಟ್ಟಿದ್ದಾರೆ.

ಬಂಧಿತರಿಂದ ಐದು ಹಿರೋ ಹೊಂಡಾ ಸ್ಪೆಂಡ್ಲರ್‌ ಬೈಕ್‌ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಚೌಕ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

Spread the loveಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ