ಈಗಾಗಲೇ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದ್ದೇವೆ. ಕೊರೊನಾ ಪೀಕ್‍ಗೆ ಹೋಗುತ್ತೆ ಎಂದು ಬಹಳ ಜನ ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ತಾಂತ್ರಿಕ ಸಲಹಾ ಸಮಿತಿ ಒಂದು ವೇಳೆ ಅನುಮತಿ ಕೊಟ್ಟರೆ ಮಹಾನಗರಗಳಲ್ಲಿಯೂ ಶಾಲೆಗಳನ್ನು ಆರಂಭಿಸಲು ಪ್ರಯತ್ನಿಸುತ್ತೇವೆ. ನಾಳೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ನಾವು ಶಾಲೆಗಳಲ್ಲಿ ಆಗಿರುವ ಪಾಸಿಟಿವಿಟಿ ಬಗ್ಗೆ ಮಂಡನೆ ಮಾಡುತ್ತೇವೆ. ತಾಂತ್ರಿಕ ಸಮಿತಿ ಅಂತಿಮ ನಿರ್ಣಯ ಕೊಟ್ಟ ನಂತರ ಸಿಎಂ ಅವರ ಜೊತೆ ಮಾತನಾಡಿ ಮುಂದಿನ ನಿರ್ಣಯ ಕೈಗೊಳ್ಳುತ್ತೇವೆ ಎಂದರು.
