Breaking News

ಜನಸಾಮಾನ್ಯರ ಭಾವನೆಗಳಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ: ಸಚಿವ ಡಾ.ಕೆ.ಸುಧಾಕರ್

Spread the love

ನಾಳೆ ನಡೆಯಲಿರುವ ಸಭೆಯಲ್ಲಿ ವೈಜ್ಞಾನಿಕ ನೆಲೆಗಟ್ಟಿನಲ್ಲಿಯೇ ಮುಖ್ಯಮಂತ್ರಿಗಳು ಎಲ್ಲರ ಸಲಹೆ ಪಡೆದುಕೊಳ್ಳುತ್ತಾರೆ. ಜನಸಾಮಾನ್ಯರನ್ನು ಯಾವುದೇ ರೀತಿ ಸಂಕಷ್ಟದಲ್ಲಿ ಸಿಲುಕಿಸಲು ಮತ್ತು ಅವರ ಭಾವನೆಗಳಿಗೆ ವಿರೋಧ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿರುವ ಹೈವೋಲ್ಟೇಜ್ ಕೋವಿಡ್ ಸಭೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಜನರ ಹಿತ ದೃಷ್ಟಿಯಲ್ಲಿ, ಆರೋಗ್ಯದ ಹಿತ ದೃಷ್ಟಿಯಲ್ಲಿ ಏನು ಅವಶ್ಯಕವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು, ಯಾವ ರೀತಿ ಕೊರೊನಾ ನಿಯಂತ್ರಣ ಮಾಡಬೇಕು ಎಂಬುದಷ್ಟೇ ನಮ್ಮ ಮುಂದಿದೆ. ಅನಿವಾರ್ಯ ಪರಿಸ್ಥಿತಿಯಲ್ಲಿ ಕೆಲವು ಕ್ರಮ ತೆಗೆದುಕೊಂಡಿದ್ದಾರೆ ಅದನ್ನು ಬಿಟ್ಟು ಜನರಿಗೆ ತೊಂದರೆ ಕೊಡುವುದರಿಂದ ಸರ್ಕಾರಕ್ಕೆ ಆದಯವೂ ಇಲ್ಲ, ಏನೂ ಇಲ್ಲ ಎಂದರು.ಈಗಾಗಲೇ ತಜ್ಞರು ವರದಿ ಕೊಟ್ಟಿದ್ದಾರೆ. ಒಂದು ದಿನಕ್ಕೆ 60 ಸಾವಿರ ಕೇಸ್‍ಗಳಿಂದ 1 ಲಕ್ಷ 20 ಸಾವಿರ ಪಾಸಿಟಿವ್ ಕೇಸ್‍ಗಳು ಬರುತ್ತವೆ ಎಂದು ಹೇಳಿದ್ದಾರೆ. ಇನ್ನು ಹೋಮ್ ಐಸೋಲೇಶನ್ ಕಿಟ್‍ಗಳನ್ನು ಬೆಂಗಳೂರಿನಲ್ಲಿ ತಕ್ಷಣವೇ ಕೊಡಲು ಪ್ರಾರಂಭ ಮಾಡಿದ್ದೇವೆ. ಅದೇ ರೀತಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೊಡಲು ಬರುವ ಎರಡ್ಮೂರು ದಿನಗಳಲ್ಲಿ ಪ್ರಾರಂಭ ಮಾಡುತ್ತೇವೆ ಎಂದರು.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ