Breaking News

ವೀಕೆಂಡ್ ರದ್ದುಗೊಳಿಸಿದ ಸರ್ಕಾರ; ತಜ್ಞರ ಸಲಹೆ ಮೆರೆಗೆ ನಿರ್ಧಾರ

Spread the love

ಬೆಂಗಳೂರು :ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇನ್ನಿತರ ನಿರ್ಬಂಧಗಳ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆದಿತ್ತು.

ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಹಾಗೂ ಸಚಿವರು ಭಾಗಿಯಾಗಿದ್ದರು.

ಸಭೆಯಲ್ಲಿ ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಹಿಂಪಡೆಯಲಾಗಿದೆ ಎನ್ನುವ ಮಾತು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಸಭೆ- ಸಮಾರಂಭಗಳಿಗೆ ಇರುವ ನಿಯಮ ಹಳೆಯ ನಿಯಮವೇ ಮುಂದುವರಿಕೆಯಾಗಲಿದೆ. ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ. ಸಭೆಯಲ್ಲಿ ಸಚಿವರಾದ ಡಾ.ಕೆ ಸುಧಾಕರ್, ಆರಗ ಜ್ಞಾನೇಂದ್ರ, ಆರ್. ಅಶೋಕ್, ಗೋವಿಂದ್ ಕಾರಜೋಳ, ಬಿಸಿ ನಾಗೇಶ್ ಭಾಗಿಯಾಗಿದ್ದರು.

ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ತೆರವಿಗೆ ತಜ್ಞರು ಶಿಫಾರಸು ಮಾಡಿದ್ದರು. ಕೊವಿಡ್ ಕಡಿಮೆ ಇರುವ ಜಿಲ್ಲೆಗಳಲ್ಲಿ 50:50 ರೂಲ್ಸ್ ಮಾಡಿ. ಕೊವಿಡ್ ಹೆಚ್ಚಿರುವ ಕಡೆ ನಿರ್ಬಂಧ ಅಗತ್ಯ ಎನ್ನಲಾಗಿದೆ.

 


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ