Breaking News

ಮಗನ ವರ್ತನೆಗೆ ಬೇಸತ್ತ ತಾಯಿ,ಮಗನನ್ನೇ ಸಂಬಂಧಿಕರೊಂದಿಗೆ ಸೇರಿ ಕೊಲೆ ಮಾಡಿದ ತಾಯಿ

Spread the love

ರಾಯಚೂರು : ವ್ಯಕ್ತಿಯೊಬ್ಬ ಇರುವ ಚಟಗಳಿಗೆಲ್ಲ ದಾಸನಾಗಿದ್ದ. ಇದರಿಂದಾಗಿ ಸಾಕಷ್ಟು ಸಾಲ ಮಾಡಿಕೊಂಡು ಕೊನೆಗೆ ಮನೆಯನ್ನೇ ಮಾರಲು ಮುಂದಾಗಿದ್ದ. ಮಗನ ವರ್ತನೆಗೆ ಬೇಸತ್ತ ತಾಯಿ ಹಾಗೂ ಸಂಬಂಧಿಕರು ಕೊಲೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಸಿರವಾರದಲ್ಲಿ ನಡೆದಿದ್ದು, ಅಮರೇಶ್(43) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಈ ವ್ಯಕ್ತಿ ಇಸ್ಪೀಟ್ ಸೇರಿದಂತೆ ಮದ್ಯದ ವ್ಯಸನಿಯಾಗಿದ್ದ ಎನ್ನಲಾಗಿದೆ. ಹೀಗಾಗಿ ಕಂಡ ಕಂಡವರಲ್ಲಿ ಸಾಕಷ್ಟು ಸಾಲ ಮಾಡಿದ್ದ. ಸಾಲ ತೀರಿಸಲು ಆಗದೆ ಕೊನೆಗೆ ಮನೆಯನ್ನೇ ಮಾರಾಟಕ್ಕೆ ಇಟ್ಟಿದ್ದ ಎನ್ನಲಾಗಿದೆ.

ಈ ವಿಷಯವಾಗಿ ಮನೆಯಲ್ಲಿ ಈತನೊಂದಿಗೆ ಜಗಳ ಆರಂಭವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ತಾಯಿ, ಆತನ ಸಹೋದರಿ ಹಾಗೂ ಭಾವ ಸೇರಿಕೊಂಡು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ