Breaking News

ಬೆಳಗಾವಿಯ 106 ನಗರ ಪೊಲೀಸರಿಗೆ ಕೊರೊನಾ ಸೋಂಕು ದೃಢ: ಕಮಿಷನರ್ ಡಾ.ಬೋರಲಿಂಗಯ್ಯ

Spread the love

ಈವರೆಗೆ ಬೆಳಗಾವಿಯ 106 ನಗರ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎಲ್ಲರೂ ಆರಾಮವಿದ್ದಾರೆ, ಎಲ್ಲರಿಗೂ ಹೋಮ್ ಐಸೋಲೇಶನ್‍ನಲ್ಲಿ ಚಿಕಿತ್ಸೆ ಕೊಡುತ್ತಿದ್ದೇವೆ. ಯಾವ ಪೊಲೀಸರು ಕೂಡ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಧೈರ್ಯ ತುಂಬಿದ್ದಾರೆ.

ಶುಕ್ರವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಬೆಳಗಾವಿ ನಗರ ಪೊಲೀಸ್ ಆಯುಕ್ತಾಲಯದಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲು ಫಿಲ್ಡಿನಲ್ಲಿ ನಾಕಾಬಂಧಿಗಳನ್ನು ಹಾಕಿಕೊಂಡು ಮತ್ತು ಪೊಲೀಸ್ ಠಾಣೆಗಳಲ್ಲಿ ದೂರು ಸ್ವೀಕರಿಸುವ ವೇಳೆ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಸಾರ್ವಜನಿಕರಿಂದ ಸಾಕಷ್ಟು ಸಂಪರ್ಕ ಇರುತ್ತದೆ.

ಈ ವೇಳೆ ಕೋವಿಡ್ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಆದಷ್ಟು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ನಮ್ಮಲ್ಲಿ ಒಟ್ಟು 1400ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿದ್ದಾರೆ. ಅದರಲ್ಲಿ ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್ ಟೆಸ್ಟ್ ಮಾಡಿದ್ದೇವೆ, ಇದರಲ್ಲಿ 106 ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ. ಕೋವಿಡ್ ಪಾಸಿಟಿವ್ ಬಂದವರಿಗೆ ಸ್ವಲ್ಪ ಜನರಿಗೆ ಮಾತ್ರ ಲಕ್ಷಣಗಳಿವೆ, ಸಾಕಷ್ಟು ಜನರಲ್ಲಿ ಲಕ್ಷಣಗಳು ಕಂಡು ಬಂದಿಲ್ಲ.

ಎಲ್ಲರಿಗೂ ಹೋಮ್ ಐಸೋಲೇಶನ್‍ನಲ್ಲಿ ಇಟ್ಟುಕೊಂಡು ಚಿಕಿತ್ಸೆ ಕೊಡುತ್ತಿದ್ದೇವೆ ಎಂದರು.
ಇನ್ನು ಪೊಲೀಸರು ಯಾವುದೇ ರೀತಿ ಭಯ ಪಡುವ ಅವಶ್ಯಕತೆ ಇಲ್ಲ. ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಂಡಿದ್ದೇವೆ. ಒಂದು ವೇಳೆ ಯಾರಿಗಾದ್ರೂ ಗಂಭೀರತೆ ಕಂಡು ಬಂದರೆ ಆಸ್ಪತ್ರೆಗೆ ಸೇರಿಸಿ ಎಲ್ಲ ರೀತಿಯ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ಎಲ್ಲರಿಗೂ ಕೂಡ ಧೈರ್ಯ ಹೇಳಿದ್ದೇವೆ ಎಂದು ಡಾ.ಎಂ.ಬಿ.ಬೋರಲಿಂಗಯ್ಯ ತಿಳಿಸಿದರು.


Spread the love

About Laxminews 24x7

Check Also

ಹುದಲಿ ಗ್ರಾಮಕ್ಕೆ ಆಗಮಿಸಿ ಗಾಂಧೀಜಿ 7 ದಿನಗಳ ಕಾಲ ವಾಸ್ತವ್ಯ ಹೂಡಿದ ನೆನಪುಗಳನ್ನು ಸ್ಮರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..

Spread the love ನಮ್ಮ ಕ್ಷೇತ್ರದ ಹೆಮ್ಮೆ ಮಹಾತ್ಮಾ ಗಾಂಧೀ – ಗಂಗಾಧರರಾವ್ ಸ್ಮಾರಕ ಭವನಕ್ಕೆ ಇಂದು ಭೇಟಿ ನೀಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ