Breaking News

ಹೆಚ್​​​ಡಿಡಿಗೆ ಕೊರೊನಾ ಪಾಸಿಟಿವ್​​ -ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್​​ ಬುಲೆಟಿನ್ ಬಿಡುಗಡೆ

Spread the love

ಬೆಂಗಳೂರು: ಜೆಡಿಎಸ್​​ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಚಿಕಿತ್ಸೆಗಾಗಿ ಹೆಚ್​ಡಿಡಿ ಅವರನ್ನು ಮಣಿಪಾಲ್​​ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮಾಜಿ ಪ್ರಧಾನಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಹೆಲ್ತ್​​ ಬುಲೆಟಿನ್​​​ನಲ್ಲಿ ಮಾಹಿತಿ ನೀಡಿದೆ.

ಮಣಿಪಾಲ್ ಆಸ್ಪತ್ರೆ ನೀಡಿರುವ ಅಧಿಕೃತ ಮಾಹಿತಿಯ ಅನ್ವಯ, ನಿನ್ನೆ ಅಂದರೆ ಜನವರಿ 21ರಂದು ಮಾಜಿ ಪ್ರಧಾನಿ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದೇವೇಗೌಡರು ಆಸ್ಪತ್ರೆ ಆರಾಮಾಗಿದ್ದು, ಆಸ್ಪತ್ರೆಯಿಂದಲೇ ತಮ್ಮ ಕೆಲಸ ಮಾಡ್ತಿದ್ದಾರೆ. ಆಸ್ಪತ್ರೆಯ ತಜ್ಞ ವೈದ್ಯರು ದೇವೇಗೌಡರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಡಾ. ಮನೀಷ್ ರೈ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.

 


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ