ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೊನಾ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಮಾಡಿ ಸಿಎಂ ಎಂ.ಕೆ. ಸ್ಟಾಲಿನ್ ಆದೇಶ ಹೊರಡಿಸಿದ್ದಾರೆ.
ಜನವರಿ 16ರಂದು ವಿಧಿಸಿದ್ದ ಲಾಕ್‌ಡೌನ್ ನಿಯಮಗಳೇ ಇಂದೂ ಅನ್ವಯಿಸುತ್ತವೆ ಎಂದು ಸಿಎಂ ತಿಳಿಸಿದ್ದಾರೆ. ಇನ್ನು, ಸೋಂಕಿನ ಪ್ರಕರಣಗಳು ಹರಡುವುದನ್ನು ತಡೆಯಲು ತೆಗೆದುಕೊಳ್ಳುತ್ತಿರುವ ಕ್ರಮಗಳಿಗೆ ಸಾರ್ವಜನಿಕರು ಸಹಕರಿಸುವಂತೆ ಮುಖ್ಯಮಂತ್ರಿ ಸ್ಟಾಲಿನ್ ಮನವಿ ಮಾಡಿಕೊಂಡಿದ್ದಾರೆ.
ಈ ವೇಳೆ ಮೊಬೈಲ್ ಆ್ಯಪ್ ಆಧಾರಿತ ಆಟೋ, ಟ್ಯಾಕ್ಸಿಗಳು ಮತ್ತು ಇತರ ವಾಹನಗಳು ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ತಮಿಳುನಾಡಿನಲ್ಲಿ 28,561 ಪಾಸಿಟಿವ್ ಕೇಸ್, 39 ಮಂದಿ ಸಾವನ್ನಪ್ಪಿದ್ದಾರೆ.
Laxmi News 24×7