Breaking News

ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಲಾಭ ಪಡೆಯರಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ

Spread the love

ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಲಾಭ ಪಡೆಯರಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ

 

ಬೆಳಗಾವಿ: ಕರೋನಾ ಸೋಂಕಿನ ಭೀತಿ ಹೆಚ್ಚಳ ಕಾರಣ ಗ್ರಾಮೀಣ ಜನತೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೈದ್ಯಕೀಯ ತಪಾಸಣಾ ಶಿಬಿರದ ಲಾಭ ಪಡೆಯಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು.

 

ಯಮಕನಮರಡಿ ಮತಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಟೀಮ್‌ ರಾಹುಲ್‌ ಸತೀಶ್‌ ಜಾರಕಿಹೊಳಿ ವತಿಯಿಂದ ಭಾನುವಾರ ಆಯೋಜಿಸಿದ್ದ ಉಚಿತ ವೈದ್ಯಕೀಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

 

ಕೋವಿಡ್‌ ಮೂರನೇ ಅಲೆ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ವಿಶೇಷ ಮುತವರ್ಜಿ ವಹಿಸಿ, ಈ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲು ಸೂಚಿಸಿದ್ದರು ಎಂದು ತಿಳಿಸಿದರು.

 

ಉಚಿತ ವೈದ್ಯಕೀಯ ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ, ಮಕ್ಕಳ ವಿಭಾಗ, ಸ್ತ್ರೀರೋಗ, ಕಿವಿ, ಮೂಗು, ಗಂಡಲು, ನೇತ್ರ ಚಿಕಿತ್ಸೆ, ಚರ್ಮ ಮತ್ತು ಲೈಂಗಿಕ ರೋಗ, ಎಲುಬು ಮತ್ತು ಕೀಲು ಚಿಕಿತ್ಸೆ, ಶಸ್ತ್ರ ಚಿಕಿತ್ಸಾ ವಿಭಾಗದ ತಜ್ಞರು ಪಾಲ್ಗೊಂಡಿದ್ದರು.

 

ಈ ವೇಳೆ ವಿದ್ಯಾರ್ಥಿಗಳು, ಮಕ್ಕಳು, ವೃದ್ಧರು, ಗ್ರಾಮಸ್ಥರು ಉಚಿತ ವೈದ್ಯಕೀಯ ತಪಾಸಣೆಯಲ್ಲಿ ಪಾಲ್ಗೊಂಡು, ಟೀಮ್‌ ರಾಹುಲ್‌ ಜಾರಕಿಹೊಳಿ ಸದಸ್ಯರ ಸಮಾಜ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 

ಈ ಸಂದರ್ಭದಲ್ಲಿ ಅನು ಕಟಾಂಬಳೆ, ಗ್ರಾಪಂ ಮಾಜಿ ಅಧ್ಯಕ್ಷ ರಾಜು ಮಾಯಣ್ಣ, ಡಾ. ಸಂದೀಪ, ಅರುಣ ಕಟಾಂಬಳೆ, ಮಲ್ಲಗೌಡ ಪಾಟೀಲ್, ಜ್ಯೋತಿಭಾ ಗುಟ್ಟೆನ್ನವರ , ನಿಖಿಲ ಸಭಾಂಜಿ ಹಾಗೂ ಇತರರು ಇದ್ದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ