Breaking News

ಲಾರಿ ಪಲ್ಟಿ; ಸ್ಥಳದಲ್ಲೇ ಮೂವರ ದುರ್ಮರಣ

Spread the love

ಹಾವೇರಿ: ಮೆಕ್ಕೆಜೋಳ ತುಂಬಿದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಹೊಸರಿತ್ತಿ ಗ್ರಾಮದ ಬಳಿ ನಡೆದಿದೆ.

 

ಆನಂದ (35), ಮಂಜು (37) ಹಾಗೂ ಆನಂದ (33) ಮೃತರು. ಮೆಕ್ಕೆಜೋಳ ತುಂಬಿದ್ದ ಲಾರಿ ಇಚ್ಚಂಗಿ ಗ್ರಾಮದಿಂದ ಹೊಸರಿತ್ತಿ ಗ್ರಾಮಕ್ಕೆ ತೆರಳುತ್ತಿತ್ತು. ಈ ವೇಳೆ ಈ ದುರಂತ ಸಂಭವಿಸಿದೆ.

 

ಮೃತರು ಲಾರಿಯಲ್ಲಿದ್ದ ಮೂವರು ಹಮಾಲರಾಗಿದ್ದು, ಲಾರಿ ಪಲ್ಟಿಯಾದ ವೇಳೆ ಲಾರಿ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಜೆಸಿಬಿ ಮೂಲಕ ಲಾರಿ ಎತ್ತಿ ಮೃತದೇಹ ಹೊರ ತೆಗೆಯಲಾಗಿದೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ