ಬೆಂಗಳೂರು : ಕೊರನಾ ನಿಯಂತ್ರಿಸಲು ವೈದ್ಯರು, ನರ್ಸ್‌ಗಳು ಅವಿರತ ಸೇವೆ ಸಲ್ಲಿಸಿದ್ದಾರೆ. ಪೊಲೀಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ವಾರಿಯರ್ಸ್‌ಗೆ ಕೃತಜ್ಞತೆ ಸಲ್ಲಿಸುತ್ತೇನೆ. ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಉಂಟಾದ ಅತಿವೃಷ್ಟಿಯನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ದೇಶದ ಪ್ರಗತಿಪರ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಅಮೃತ ಮಹೋತ್ಸವ ಸಂದರ್ಭದಲ್ಲಿ ಹಲವು ಯೋಜನೆ, ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ. ಅಮೃತ ಗ್ರಾಮಪಂಚಾಯತಿಗಳ ಅಮೃತ ರೈತ, ಅಮೃತ ಗ್ರಾಮೀಣ ವಸತಿ ಯೋಜನೆ, ಅಮೃತ ನಿರ್ಮಲ, ಅಮೃತ ಶಾಲಾ ಮೂಲಸೌಕರ್ಯ ಕಾರ್ಯಕ್ರಮ, ಅಮೃತ ಅಂಗನವಾಡಿ ಕೇಂದ್ರಗಳು, ಅಮೃತ ನಗರೋತ್ಥಾನ, ಒಟ್ಟು 14 ಅಮೃತ ಮಹೋತ್ಸವ ಕಾರ್ಯಕ್ರಮ ಘೋಷಿಸಿದೆ ಎಂದು ಸರ್ಕಾರದ ಹಾಗೂ ನಾಡಿನ ಜನರ ಬಗ್ಗೆ ರಾಜ್ಯಪಾಲರು ಮೆಚ್ಚುಗೆಯ ನುಡಿಗಳನ್ನು ಆಡಿದ್ದಾರೆ.
