ಈ ಬಾರಿ ಗಣರಾಜ್ಯೋತ್ಸವಕ್ಕೂ ಕೊರೋನಾ ಕರಿನೆರಳು ಆವರಿಸಿದೆ. ಹೆಚ್ಚು ಜನರು ಸೇರುವಂತಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆಗೂ ಬ್ರೇಕ್ ಬಿದ್ದಿದೆ. ಈ ನಡುವೆ ದೆಹಲಿ ರಾಜಪಥನ್ನಿಂದ ನ್ಯಾಷನಲ್ ಸ್ಟೇಡಿಯಂವರೆಗೆ ಮೆರವಣಿಗೆ ನಡೆಯಲಿದೆ. ವಿವಿಧ ರಾಜ್ಯಗಳ ಜಾನಪದ ಕಲಾ ಪ್ರದರ್ಶನ ಜತೆಗೆ ಬಾನಂಗಳದಲ್ಲಿ ವಿಮಾನಗಳ ಹಾರಾಟ ನಡೆಯಲಿದೆ.
ಇನ್ನು ಕೊರೋನಾ ಕಾರಣದಿಂದ ದೆಹಲಿಯಲ್ಲೂ ಕಟ್ಟೆಚ್ಚರವಹಿಸಲಾಗಿದೆ. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಎರಡೂ ಡೋಸ್ ವ್ಯಾಕ್ಸಿನೇಷನ್ ಕಡ್ಡಾಯಗೊಳಿಸಲಾಗಿದ್ದು, 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಷವನ್ನು ನಿಷೇಧಿಸಲಾಗಿದೆ. ಹೀಗಾಗಿ ಕಳೆದ ವರ್ಷದಂತೆ ಈ ವರ್ಷವೂ ಬಿಗಿ ನಿಯಮಗಳ ಮಧ್ಯೆ ಗಣರಾಜ್ಯೋತ್ಸವ ಆಚರಣೆಯಾಗುತ್ತಿದೆ.