Breaking News

ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವಿಜಯಪುರದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು.

Spread the love

ವಿಜಯಪುರ: ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಜತೆಗೆ ವಿಜಯಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಿ ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವಿಜಯಪುರದ ಕಾಂಗ್ರೆಸ್ ಮುಖಂಡರು ಮನವಿ

ಮಾಡಿದರು.

ಬೆಂಗಳೂರಿನಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿದ ಮುಖಂಡರು, ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವುದಕ್ಕೆ ಅವರನ್ನು ಅಭಿನಂದಿಸಿ ಮನವಿ ಪತ್ರ ಸಲ್ಲಿಸಿದರು.

ದೇವನಹಳ್ಳಿ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿದೆ. ರಸ್ತೆಗಳು ಅಭಿವೃದ್ಧಿಯಾಗಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಬೇಕು. ಈ ಭಾಗದಲ್ಲಿನ ಸಾಕಷ್ಟು ಕೆರೆಗಳಿಗೆ ಎಚ್.ಎನ್. ವ್ಯಾಲಿ ಯೋಜನೆಯಡಿ ನೀರು ಹರಿದಿಲ್ಲ. ಈ ಯೋಜನೆಯಡಿ ನೀರು ಹರಿಸಬೇಕು ಎಂದು

ಒತ್ತಾಯಿಸಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾದ ನಂತರ ತಾಲ್ಲೂಕಿನಲ್ಲಿ ಕೈಗಾರಿಕೆಗಳ ಸ್ಥಾಪನೆ ಹೆಚ್ಚಾಗುತ್ತಿದ್ದು, ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ಅವಕಾಶ ಕಲ್ಪಿಸಿಕೊಡಬೇಕು. ವಿಜಯಪುರ ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ, ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಕೆ.ಎಸ್.ಆರ್.ಟಿ.ಸಿ ಡಿಪೊ ನಿರ್ಮಾಣ ಮಾಡಲು 4 ಎಕರೆ ಭೂಮಿ ಮೀಸಲಿಟ್ಟು, ಕಾಂಪೌಂಡ್ ನಿರ್ಮಾಣ ಮಾಡಿದ್ದರೂ ಕೂಡ ಇದುವರೆಗೂ ಡಿಪೊ ನಿರ್ಮಾಣ ಕಾರ್ಯವಾಗಿಲ್ಲ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡ ಬಿ. ಚೇತನ್ ಗೌಡ ಮಾತನಾಡಿ, ವಿಜಯಪುರದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಒಳಚರಂಡಿ ವ್ಯವಸ್ಥೆಯಾಗಬೇಕು. ಅನೇಕ ವರ್ಷಗಳಿಂದ ನಿವೇಶನಗಳಿಲ್ಲದೆ ವಾಸ ಮಾಡಲು ಯೋಗ್ಯವಾದ ಮನೆಗಳಿಲ್ಲದೆ ಜನರು ಪರದಾಡುತ್ತಿದ್ದಾರೆ. ಅವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಪಟ್ಟಣದಲ್ಲಿ ಹಾಳಾಗಿರುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಅನುದಾನ ಒದಗಿಸಬೇಕು. ಪುರಸಭೆಗೆ ಆದಾಯ ಕಡಿಮೆಯಾಗಿದೆ. ಅಭಿವೃದ್ಧಿಯತ್ತ ಕೊಂಡೊಯ್ಯಲು ಹೆಚ್ಚಿನ ಅನುದಾನ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು


Spread the love

About Laxminews 24x7

Check Also

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

Spread the love ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ