Breaking News

ದೇಶದಲ್ಲಿ 2.86 ಲಕ್ಷ ಹೊಸ ಪ್ರಕರಣ,

Spread the love

ನವದೆಹಲಿ: ದೇಶದಲ್ಲಿ ಗುರುವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 2,86,384 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೂಲಕ ಬುಧವಾರಕ್ಕೆ ಹೋಲಿಸಿದಾಗ ಅಲ್ಪ ಏರಿಕೆ ಕಂಡುಬಂದಿದೆ.

ಬುಧವಾರದಂದು 2.85 ಲಕ್ಷ ಕೋವಿಡ್ ಪ್ರಕರಣಗಳು ದಾಖಲಾಗಿದ್ದವು.

ಕಳೆದ 24 ತಾಸಿನಲ್ಲಿ 573 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

3,06,357 ಮಂದಿ ಗುಣಮುಖರಾಗಿದ್ದು, ಒಟ್ಟು 3,76,77,328 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೇಶದಲ್ಲಿ ಸಕ್ರಿಯ ಪ್ರಕರಣ ಸಂಖ್ಯೆ 22,02,472ಕ್ಕೆ ತಲುಪಿದೆ. ದೈನಂದಿನ ಕೋವಿಡ್ ದೃಢ ಪ್ರಮಾಣವು ಶೇಕಡ 19.59 ಆಗಿದೆ.

ಕಳೆದ 24 ತಾಸಿನಲ್ಲಿ 14,62,261 ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ. ಹಾಗೆಯೇ ಇದುವರೆಗೆ ಒಟ್ಟು 72.21 ಕೋಟಿ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ.

ದೇಶದಲ್ಲಿ 163.84 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ