ಬೆಂಗಳೂರು: ಫೆಬ್ರವರಿ 14ರಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಬಿಎಂಪಿ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆದಿದೆ.
ಫೆಬ್ರವರಿ 14ರಿಂದ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸುತ್ತೇವೆ. ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳ ಬಗ್ಗೆ ಸಚಿವ ಮಾಧುಸ್ವಾಮಿ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.