ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘777 ಚಾರ್ಲಿ’ ಸೆನ್ಸಾರ್ನಲ್ಲಿ ಪಾಸ್ ಆಗಿದ್ದು, ಯು/ಎ ಸರ್ಟಿಫಿಕೆಟ್ ಪಡೆದುಕೊಂಡಿದೆ.
ಕಳೆದ ಎರಡು ವರ್ಷಗಳಿಂದ ಚಿತ್ರೀಕರಣ ಮುಗಿಸಿರುವ ಚಿತ್ರವು ಟೀಸರ್ ಹಾಗೂ ಹಾಡುಗಳಿಂದ ಸಖತ್ ಸದ್ದು ಮಾಡುತ್ತಿದೆ.
ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಜೊತೆ ಸಂಗೀತಾ ಶೃಂಗೇರಿ ತೆರೆ ಹಂಚಿಕೊಂಡಿದ್ದು, ಒಬ್ಬ ಮನುಷ್ಯನ ಬಾಳಲ್ಲಿ ಚಾರ್ಲಿ ಎಂಬ ನಾಯಿಯ ಆಗಮನದಿಂದ ಏನೆಲ್ಲ ಆಗುತ್ತೆ ಅನ್ನೋದು ಈ ಸಿನಿಮಾ ಸ್ಟೋರಿ.
ಯುವ ನಿರ್ದೇಶಕ ಕಿರಣ್ ರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿಯ ಜೊತೆಗೆ ಲ್ಯಾಬ್ರಡಾರ್ ನಾಯಿ ಪೂರ್ಣ ಪ್ರಮಾಣದ ಪಾತ್ರದಲ್ಲಿ ಕಾಣಿಸಿಕೊಂಡಿದೆ.
ಈ ಚಿತ್ರವು 5 ಭಾಷೆಗಳಲ್ಲಿ ನಿರ್ಮಾಣ ಆಗಿದ್ದು, ನೊಬಿನ್ ಪೌಲ್ ಸಂಗೀತ ಹಾಗೂ ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.
Laxmi News 24×7