Breaking News

ಜೆಡಿಎಸ್‌ ಶಾಸಕ ಪುಟ್ಟರಾಜು-ಸಿದ್ದರಾಮಯ್ಯ ಭೇಟಿ: ರಾಜಕೀಯ ವಲಯದಲ್ಲಿ ಚರ್ಚೆ

Spread the love

ಬೆಂಗಳೂರು: ಮೇಲುಕೋಟೆ ಜೆಡಿಎಸ್‌ ಶಾಸಕ ಸಿ.ಎಸ್‌. ಪುಟ್ಟರಾಜು ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರುವಾರ ರಾತ್ರಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಸಂಜೆ 7.30ರ ಸುಮಾರಿಗೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ಪುಟ್ಟರಾಜು ಬಂದಿದ್ದರು. ಇಬ್ಬರೂ ಸುಮಾರು 1 ಗಂಟೆ ರಾಜ್ಯ ರಾಜಕೀಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.

ಮೇಲುಕೋಟೆಯ ವಲ್ಲಿ ಡೆಂಕಾಪುರ ಗ್ರಾಮದಲ್ಲಿರುವ ಶ್ರೀ ಬೀರೇಶ್ವರ ದೇವಸ್ಥಾನದ ಉದ್ಘಾಟನೆ ಫೆ. 14ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನಿಸಲು ಪುಟ್ಟರಾಜು ಬಂದಿದ್ದರು ಎಂದೂ ಮೂಲಗಳು
ಹೇಳಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ