Breaking News

ನೈಟ್ ಕರ್ಫ್ಯೂ ನಿರ್ಬಂಧ ಸಡಿಲಿಕೆ ಬಗ್ಗೆ ನಿರ್ಧಾರ: ಇಂದು ಸಿಎಂ ಹೈವೋಲ್ಟೇಜ್ ಮೀಟಿಂಗ್

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿದ್ದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕಡಿಮೆ ಇರುವುದರಿಂದ ರಾಜ್ಯದಲ್ಲಿ ನಿರ್ಬಂಧ ಸಡಿಲಿಕೆಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

 

ಶೇಕಡ 50 ರ ಮಿತಿ ನಿರ್ಬಂಧ ಸಡಿಲಿಕೆ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುವುದು. ಇದರೊಂದಿಗೆ ನೈಟ್ ಕರ್ಫ್ಯೂ ಸಮಯ ಬದಲಾವಣೆ, ಕರ್ಫ್ಯೂ ಮುಂದುವರಿಕೆ, ಬೆಂಗಳೂರಿನಲ್ಲಿ 1 ರಿಂದ 9ನೇ ತರಗತಿ ಆರಂಭ ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸುವ ಸಾಧ್ಯತೆ ಇದೆ.

ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ ಶಾಲೆ ತೆರೆಯಲು ಶಿಫಾರಸು ಮಾಡಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ಈಜುಕೊಳ, ಜಿಮ್, ಹೋಟೆಲ್, ಬಾರ್, ರೆಸ್ಟೋರೆಂಟ್, ಸಭಾಂಗಣಗಳಲ್ಲಿ ಶೇಕಡ 50 ರ ಮಿತಿ ಸಡಿಲಿಕೆ ಬಗ್ಗೆಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ನೈಟ್ ಕರ್ಫ್ಯೂ ಮುಂದುವರಿಕೆ ಇಲ್ಲವೇ ಸಮಯ ಬದಲಾವಣೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ