Breaking News

ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಸಿಎಂ ನಿರ್ದೇಶನ: ಆರಗ ಜ್ಞಾನೇಂದ್ರ.

Spread the love

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಶ್ರಯ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಇರುವ ವಾರ್ಷಿಕ ವರಮಾನ ಮಿತಿಯನ್ನು 1.20 ಲಕ್ಷ ರೂ.ಗೆ ಹೆಚ್ಚಿಸಲು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವರಮಾನ ಮಿತಿ ಹೆಚ್ಚಿಸುವಂತೆ, ವಸತಿ ವಂಚಿತ ಬಡವರು ಮನವಿ ಸಲ್ಲಿಸುತ್ತಾ ಬಂದಿದ್ದು, ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ, ಮುಖ್ಯಮಂತ್ರಿಗಳು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡುದಾರರ ವರಮಾನ ಮಿತಿಯನ್ನು 1.20 ಲಕ್ಷ ರೂ.ಗೆ ಈಗಾಗಲೇ ಹೆಚ್ಚಿಸಿದೆ, ಆದರೆ ರಾಜ್ಯದಲ್ಲಿ, ಆಶ್ರಯ ಯೋಜನೆ ಫಾನುಭವಿಗಳಿಗೆ ವರಮಾನ ಮಿತಿ 32 ಸಾವಿರ ರೂ.ನಷ್ಟಿದ್ದು, ಹೆಚ್ಚಿನ ಅರ್ಹರು ಯೋಜನೆಯ ಲಾಭ ಪಡೆಯುವುದರಿಂದ ವಂಚಿತರಾಗಿದ್ದಾರೆ.

ತನ್ನ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಗಳಿಗೆ ಹಾಗೂ ವಸತಿ ಖಾತೆಯ ಕಾರ್ಯದರ್ಶಿಗಳಿಗೆ, ಸೂಕ್ತ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿರ್ಧಾರದಿಂದ ಲಕ್ಷಾಂತರ ಮಂದಿ ವಸತಿ ವಂಚಿತ ಬಡವರು ಪ್ರಯೋಜನ, ಪಡೆಯಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ