Breaking News
Home / ಜಿಲ್ಲೆ / ಬ್ರೇಕಿಂಗ್ : ರಾಜ್ಯದಲ್ಲಿ 4 ತಿಂಗಳ ಮಗು ಸೇರಿ ಇಂದು 7 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 425ಕ್ಕೇರಿಕೆ

ಬ್ರೇಕಿಂಗ್ : ರಾಜ್ಯದಲ್ಲಿ 4 ತಿಂಗಳ ಮಗು ಸೇರಿ ಇಂದು 7 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 425ಕ್ಕೇರಿಕೆ

Spread the love

ಬೆಂಗಳೂರು, ಏ.22- ಕಲಬುರಗಿಯಲ್ಲಿ ನಾಲ್ಕು ತಿಂಗಳ ಗಂಡು ಮಗುವಿಗೆ ಕೊರೊನಾ ಸೋಂಕು ತಗುಲಿರುವುದು ಸೇರಿದಂತೆ ಇಂದು ಒಟ್ಟು 7 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದ್ದು, 129 ಮಂದಿ ಕೋವಿಡ್-19ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು ನಗರದಲ್ಲಿ 54 ವರ್ಷದ ವ್ಯಕ್ತಿ ತೀವ್ರ ಉಸಿರಾಟದ ತೊಂದರೆಯಿಂದ ಕೊರೊನಾ ಸೋಂಕಿತರಾಗಿದ್ದು, ಇವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೊರೊನಾ ಸೋಂಕಿತ ರೋಗಿ ನಂ.208ರೊಂದಿಗೆ ಸಂಪರ್ಕ ಹೊಂದಿದ ಬೆಂಗಳೂರಿನ 28 ವರ್ಷದ ಮಹಿಳೆಗೆ ಕೊರೊನಾ ತಗುಲಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿಯ 46 ವರ್ಷದ ಮಹಿಳೆ ರೋಗಿ ನಂ.222ರ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ಪರಿಣಾಮ ಕೊರೊನಾ ಸೋಂಕಿತರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 57 ವರ್ಷದ ವ್ಯಕ್ತಿ ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಅದೇ ರೀತಿ ಕಲಬುರಗಿಯ 35 ವರ್ಷದ ಹಾಗೂ 26 ವರ್ಷದ ಮಹಿಳೆಯರಿಬ್ಬರಿಗೆ ಹಾಗೂ 4 ತಿಂಗಳ ಮಗುವಿಗೂ ರೋಗಿ ನಂ.329ರೊಂದಿಗೆ ಸಂಪರ್ಕದಲ್ಲಿದ್ದ ಪರಿಣಾಮ ಕೊರೊನಾ ಹಬ್ಬಿದೆ.ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಕಲಬುರಗಿಯಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೊನಾ ತಗುಲಿದೆ.

ಮಧ್ಯಾಹ್ನ 12 ಗಂಟೆಯಲ್ಲಿ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ನಂಜನಗೂಡಿನ ಜ್ಯುಬಿಲಿಯಂಟ್, ಮೈಸೂರು, ಬೆಳಗಾವಿ ಸೇರಿದಂತೆ ಯಾವುದೇ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ