Breaking News

ಹೈಕೋರ್ಟ್‌ ರಿಜಿಸ್ಟ್ರಾರ್‌ ವಿರುದ್ಧ ದಾವೆ; ಅರ್ಜಿದಾರರಿಗೆ ₹ 11 ಲಕ್ಷ ದಂಡ

Spread the love

ಬೆಂಗಳೂರು : ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ.

ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ದಂಡದ ಮೊತ್ತವನ್ನು 8 ವಾರಗಳಲ್ಲಿ ವಕೀಲರ ಪರಿಷತ್ತಿಗೆ ಪಾವತಿಸಬೇಕು. ನಿಗದಿತ ಅವಧಿಯಲ್ಲಿ ದಂಡದ ಮೊತ್ತ ಪಾವತಿಸದೇ ಹೋದಲ್ಲಿ ಜಿಲ್ಲಾಧಿಕಾರಿಗಳು ದಂಡ ವಸೂಲಿಗೆ ಕ್ರಮ ಕೈಗೊಳ್ಳಬೇಕು. ದಂಡದ ಮೊತ್ತ ಪಾವತಿಯಾಗದಿದ್ದರೆ ವಕೀಲರ ಪರಿಷತ್ತು ಅರ್ಜಿದಾರರ ವಿರುದ್ಧ ನ್ಯಾಯಾಂಗ ನಿಂದನೆ ದಾವೆ ಹೂಡಬಹುದು’ ಎಂದು ಆದೇಶಿಸಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು 2021ರ ಮೇ 19ರಂದು ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿ ₹ 1 ಲಕ್ಷ ದಂಡ ವಿಧಿಸಿತ್ತು. ದಂಡದ ಮೊತ್ತ ವಸೂಲಿ ಮಾಡುವಂತೆ ರಿಜಿಸ್ಟಾರ್ ಜನರಲ್ ಅವರಿಗೆ ನಿರ್ದೇಶಿಸಿತ್ತು.

ದಂಡದ ಮೊತ್ತ ಪಾವತಿಸದ ಅರ್ಜಿದಾರರರು ರಿಜಿಸ್ಟ್ರಾರ್ ಜನರಲ್ ವಿರುದ್ಧ 11 ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಪೀಠ ಒಂದೊಂದು ಅರ್ಜಿಗೆ ತಲಾ ₹ 1 ಲಕ್ಷದಂತೆ ಒಟ್ಟು ₹ 11 ಲಕ್ಷ ದಂಡ ವಿಧಿಸಿ ಆದೇಶಿಸಿದೆ.


Spread the love

About Laxminews 24x7

Check Also

ಸಿಎಂ ಡಿನ್ನರ್‌ ಪಾರ್ಟಿಯಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

Spread the love ಮೈಸೂರು: ನಾನೂ ಸಿಎಂ ಸಿದ್ದರಾಮಯ್ಯನವರ ಡಿನ್ನರ್‌ ಪಾರ್ಟಿಗೆ ಹೋಗಿದ್ದೆ. ಅಲ್ಲಿ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ಆಗಿಲ್ಲ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ