Breaking News

ಬಿಜೆಪಿ-ಜೆಡಿಎಸ್‌ನಿಂದ ಷರತ್ತುಗಳಿಲ್ಲದೇ ಕಾಂಗ್ರೆಸ್‌ಗೆ​ ಸೇರಲು ಎಲ್ಲರಿಗೂ ಅವಕಾಶ : ಮಾಜಿ ಸಿಎಂ ಸಿದ್ದರಾಮಯ್ಯ

Spread the love

ಬಾಗಲಕೋಟೆ : ಯಾರೇ ಪಕ್ಷ ಸೇರಿದರೂ ಸ್ವಾಗತ. ಆದರೆ, ಯಾವುದೇ ಷರತ್ತುಗಳು ಹಾಕುವಂತಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು. ಇದಕ್ಕೆಲ್ಲಾ ಸಿದ್ಧವಾಗಿದ್ದರೆ ಮಾತ್ರ ಪಕ್ಷಕ್ಕೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ಗೆ ಸೇರಲು ಬಿಜೆಪಿ ಮತ್ತು ಜೆಡಿಎಸ್​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರ ಹೆಸರು ಮಾತ್ರ ಹೇಳಲ್ಲ. ನಾವು ಯಾವಾಗಲೂ ಚುನಾವಣೆಗೆ ಸಿದ್ಧರಿದ್ದೇವೆ. ವಿಧಾನಸಭೆಗೂ ರೆಡಿ ಇದ್ದೇವೆ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆಗೂ ಸಿದ್ಧರಿದ್ದೇವೆ ಎಂದರು.

ಜನರ ಅಹವಾಲು ಸ್ವೀಕಾರ

ಇದಕ್ಕೂ ಮೊದಲು ಖಾಸಗಿ ಹೋಟೆಲ್​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಕ್ಷೇತ್ರದ ವಿವಿಧ‌ ಪ್ರದೇಶಗಳಿಂದ ಆಗಮಿಸಿದ ಜನರು, ತಮ್ಮ ಸಮಸ್ಯೆಗಳನ್ನು ಬಗೆಹರಿಸಿ ಕೊಡುವಂತೆ ಮಾಜಿ ಸಿಎಂ ಬಳಿ ಮನವಿ ಮಾಡಿದರು. ಈ ವೇಳೆ ಸಿದ್ದರಾಮಯ್ಯನವರಿಗೆ ಹೂವಿನ ಹಾರ ಹಾಕಲು ಬಂದ ಅಭಿಮಾನಿಗಳಿಂದ ಹಾರ ತೆಗೆದುಕೊಂಡು ಮರಳಿ ಅವರಿಗೇ ಹಾಕಿ ಗಮನ ಸೆಳೆದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ