ಬೆಂಗಳೂರು, ಜ. 29: ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರ ನಿಯಮ ಬಾಹಿರ ತೀರ್ಮಾನಗಳು, ಕನ್ನಡ ವಿರೋಧಿ ನೀತಿ ಅವರನ್ನೇ ಪೇಚಿಗೆ ಸಿಲುಕಿಸುತ್ತಿವೆ. ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸುತ್ತಿರುವ ಡಿಜಿಪಿ ಪ್ರವೀಣ್ ಸೂದ್ ಅವರ ವಿರುದ್ಧ ಪದೇ ಪದೇ ನ್ಯಾಯಾಂಗ ನಿಂದನೆ ನೋಟಿಸ್‌ಗಳು ಜಾರಿಯಾಗಿ ಡಿಜಿಪಿ ಕಚೇರಿ ಕದ ತಟ್ಟುತ್ತಿವೆ.
ವರ್ಗಾವಣೆ, ಬಡ್ತಿ, ಐಪಿಎಸ್ ನಾನ್ ಐಪಿಎಸ್ ಹುದ್ದೆಗಳ ಹಂಚಿಕೆ ಸೇರಿದಂತೆ ಪೊಲೀಸ್ ಆಡಳಿತ ವ್ಯವಸ್ಥೆಗೆ ಸಂಬಂಧಸಿದಂತೆ ಡಿಜಿಪಿ ಅನುಸರಿಸುತ್ತಿರುವ ಧೋರಣೆ ವಿರುದ್ಧ ಇಲಾಖೆಯಲ್ಲಿ ತೀವ್ರ ಅಸಮಾಧಾನ ಹುಟ್ಟಿಕೊಂಡಿದೆ. ಅದು ಡಿಜಿಪಿ ನಿರ್ಣಯಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಿ ನಿರ್ದೇಶನ ಕೊಡಿಸುತ್ತಿದ್ದಾರೆ. ಈ ಬೆಳವಣಿಗೆ ಗಮನಿಸಿದರೆ ರಾಜ್ಯದಲ್ಲಿ ಪೊಲಿಸ್ ಆಡಳಿತ ಕುಸಿದಿದೆಯೇ ಎಂಬ ಅನುಮಾನ ಕಾಡುತ್ತದೆ.
ಸರಣಿ ನ್ಯಾಯಾಂಗ ನಿಂದನೆ ಪ್ರಕರಣ:
ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತದೋ ಆ ರಾಜ್ಯ ಶಾಂತಿಯುತವಾಗಿರುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿರಬೇಕಾದರೆ, ಮೊದಲು ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸ್ ಸಿಬ್ಬಂದಿ ಕೂಡ ಚೆನ್ನಾಗಿರಬೇಕು. ಆದರೆ, ರಾಜ್ಯದಲ್ಲಿ ಹಾಲಿ ಡಿಜಿಪಿ ಪ್ರವೀಣ್ ಸೂದ್ ಅವರು, ವರ್ಗಾವಣೆ, ಬಡ್ತಿ, ನಾನ್ ಐಪಿಎಸ್ ಹುದ್ದೆಗಳಿಗೆ ಅರ್ಹರ ನಿಯೋಜನೆ ವಿಚಾರದಲ್ಲಿ ಹೊರಡಿಸಿರುವ ನಿಯಮ ಬಾಹಿರ ಆದೇಶಗಳಿಂದ ಅನ್ಯಾಯಕ್ಕೆ ಒಳಗಾದವರು ನ್ಯಾಯಾಲಯದ ಮೊರೆ ಹೋಗುತ್ತಿದ್ದಾರೆ. ನ್ಯಾಯ ಕೋರಿ ಅರ್ಜಿ ಸಲ್ಲಿಸುತ್ತಿದ್ದಾರೆ