Breaking News

ಬಾಪುವನ್ನು ಕೊಂದ ಶಕ್ತಿಗಳು ಇಂದಿಗೂ ಜನರ ಹತ್ಯೆಯಲ್ಲಿ ತೊಡಗಿವೆ: ಪಿಣರಾಯಿ ವಿಜಯನ್‌

Spread the love

ತಿರುವನಂತಪುರ: ಹುತಾತ್ಮರ ದಿನದಂದು ಕೋಮುವಾದದ ವಿರುದ್ಧ ಹೋರಾಡಲು ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಪ್ರತಿಜ್ಞೆ ಮಾಡೋಣ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಅವರು, ‘ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ಶಕ್ತಿಗಳೇ ಧರ್ಮದ ಹೆಸರಿನಲ್ಲಿ ಇಂದಿಗೂ ಜನರನ್ನು ಹತ್ಯೆ ಮಾಡುತ್ತಿವೆ.

ಅವರು ಇಂದು ನಮ್ಮ ದೇಶಕ್ಕೆ ದೊಡ್ಡ ಬೆದರಿಕೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.

https://twitter.com/vijayanpinarayi/status/1487634444844355584/photo/1?ref_src=twsrc%5Etfw%7Ctwcamp%5Etweetembed%7Ctwterm%5E1487634444844355584%7Ctwgr%5E%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada

‘ಗಾಂಧೀಜಿಯವರ ನೆನಪು ಹಿಂದೆಂದಿಗಿಂತಲೂ ಈಗ ಪ್ರಸ್ತುತವಾಗಿದೆ. ಹುತಾತ್ಮರ ದಿನದಂದು, ಕೋಮುವಾದದ ವಿರುದ್ಧ ಹೋರಾಡಲು ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಪ್ರತಿಜ್ಞೆ ಮಾಡೋಣ’ ಎಂದೂ ಪಿಣರಾಯಿ ಹೇಳಿದ್ದಾರೆ.

ಜ.30ರಂದು ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಭಾರತದ ಸ್ವಾತಂತ್ರ್ಯಕ್ಕೋಸ್ಕರ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರ ಸ್ಮರಣೆಗಾಗಿ ದೇಶದಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ