ಕೋಲಾರ: ಬದುಕಿರುವ ರೈತನಿಗೆ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ತಹಸೀಲ್ದಾರ್ ಸೇರಿದಂತೆ ನಾಲ್ವರು ಅಧಿಕಾರಗಳ ಎಫ್ಐಆರ್ ದಾಖಲಿಸಲಾಗಿದೆ.
ರೈತ ಶಿವರಾಜ್ (40) ಎಂಬ ರೈತನಿಗೆ ಮರಣ ಪ್ರಮಾಣ ಪತ್ರ ನೀಡಿರುವ ಅಧಿಕಾರಿಗಳು.
ಮುಳಬಾಗಿಲು ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದ ರೈತ ಶಿವರಾಜ್, ಪಡಿತರ ಪಡೆಯಲು ಹೋದ ವೇಳೆ ತಮ್ಮ ಹೆಸರು ಇಲ್ಲದಿರುವುದು ಮತ್ತು ಮೃತಪಟ್ಟಿರುವುದಾಗಿ ದಾಖಲಾಗಿರುವುದನ್ನು ನೋಡಿ ಆಘಾತಕ್ಕೆ ಒಳಗಾಗಿದ್ದರು.
ಬಳಿಕ ಈ ಬಗ್ಗೆ ವಿಚಾರಿಸಿದಾಗ ಹಿಂದಿನ ತಹಸೀಲ್ದಾರ್ ಜಿ. ರಾಜಶೇಖರ್, ಗ್ರಾಮ ಲೆಕ್ಕಿಗ ಅರವಿಂದ, ಕಂದಾಯ ನಿರೀಕ್ಷಿಕ ಸಾದತ್ ವುಲ್ಲಾ ಖಾನ್, ನಾಡಕಚೇರಿ ಶಿರೇಸ್ತೆದಾರ್ ಜಯರಾಂ ಕೃತ್ಯ ಎಂಬುದು ಬಹಿರಂಗವಾಗಿದ್ದು, ಅಧಿಕಾರಿಗಳ ವಿರುದ್ಧ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದು ಅಧಿಕಾರಿಗಳು ಮಾಡಿದ ಎಡವಟ್ ಅಥವಾ ಉದ್ದೇಶಪೂರ್ವಕವಾಗಿಯೇ ಮಾಡಿದ ಕೃತ್ಯವಾ ಎಂದು ತನಿಖೆಯಿಂದ ತಿಳಿದುಬರಬೇಕಿದೆ.