Breaking News

ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Spread the love

ಬೆಂಗಳೂರು: ಎವಿಬಿಪಿ ಸಂಘಟನೆ ಜೊತೆ ಸೇರಿ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ವಿವಿ ಆವರಣದ ಮುಂಭಾಗದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ಘಟನೆಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ

ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ (ಜ್ಞಾನ ಭಾರತಿ) ನಡೆದ ಪ್ರತಿಭಟನೆಯಲ್ಲಿ ಮುಖ್ಯವಾಗಿ ಪರೀಕ್ಷೆ, ಮೌಲ್ಯಮಾಪನ ಮತ್ತು ಫಲಿತಾಂಶ ನೀಡುವಲ್ಲಿ ವಿವಿಯ ವಿಳಂಬ ಧೋರಣೆ ಮತ್ತು ದ್ವಂದ್ವ ನಿಲುವು ಕುರಿತು ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.‌ ಮೌಲ್ಯಮಾಪನ ಆಗಿ ಸುಮಾರು ದಿನಗಳು ಕಳೆದರೂ ಇನ್ನೂ M.COM, MCA, B.Sc, M.Sc MA, B.Ed, MBA ಹಾಗೂ ಇತರ ವಿಭಾಗಗಳ ಫಲಿತಾಂಶ ಪ್ರಕಟವಾಗಿಲ್ಲ.ಹೀಗಾಗಿ ಈ ಕೂಡಲೇ ಫಲಿತಾಂಶ ಪ್ರಕಟವಾಗಬೇಕು. ಬಿ.ಎಡ್ ಪದವಿಯ ಅಂಕಪಟ್ಟಿ ಹಾಗೂ ಘಟಿಕೋತ್ಸವ ಪ್ರಮಾಣ ಪತ್ರ ನೀಡಬೇಕು.

ಸ್ನಾತಕ, ಸ್ನಾತಕೋತ್ತರ ಮತ್ತು ವಿದ್ಯಾಭ್ಯಾಸ ಮುಗಿಸಿರುವ ಹಿರಿಯ ವಿದ್ಯಾರ್ಥಿಗಳಿಗೆ ಅವರ ಅಂಕಪಟ್ಟಿ ಹಾಗೂ ಪದವಿ ಪ್ರಮಾಣ ಪತ್ರವನ್ನು ನೀಡಬೇಕು. ಕೋವಿಡ್-19 ಕಾರಣದಿಂದಾಗಿ ಪರೀಕ್ಷೆಯನ್ನು ಬರೆಯಲಿಕ್ಕೆ ಆಗದ 2015 ಮತ್ತು 2016ನೇ ಸಾಲಿನ ವಿದ್ಯಾರ್ಥಿಗಳಿಗೆ ಒಂದು ಬಾರಿ ನಿರ್ಗಮನ ಯೋಜನೆ (one time exit scheme) ಪರೀಕ್ಷೆ ನೀಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಗೆ ತ್ಯಾಜ್ಯ ಬಿಸಾಡಿದರೆ ಬೀಳುತ್ತೆ ದಂಡ

Spread the loveಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆಯ ಕುಮಾರಧಾರ ನದಿಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಪೊಲೀಸ್ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ